ಮಂಗಳವಾರ, ಜೂನ್ 15, 2021
27 °C

ಚಿತ್ರದುರ್ಗ: 54 ಜನರಿಗೆ ಕೋವಿಡ್ ಸೋಂಕು, ಮೂರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಜಿಲ್ಲೆಯಲ್ಲಿ ಬುಧವಾರ 54 ಜನರಿಗೆ ಕೋವಿಡ್‌ ಇರುವುದು ಖಚಿತವಾಗಿದ್ದು, ಒಂದೇ ದಿನ ಮೂವರು ಮೃತಪಟ್ಟಿದ್ದಾರೆ. ಕೊರೊನಾ ಸೋಂಕಿತರ ಸಂಖ್ಯೆ 1,650ಕ್ಕೆ ಏರಿಕೆಯಾಗಿದೆ.

ಬುಧವಾರ 683 ಜನರ ಗಂಟಲು ಮತ್ತು ಮೂಗು ದ್ರವದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ ಚಿತ್ರದುರ್ಗ ತಾಲ್ಲೂಕಿನಲ್ಲಿ 18, ಹಿರಿಯೂರು 7, ಚಳ್ಳಕೆರೆ13, ಹೊಸದುರ್ಗ 9 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 7 ಸೇರಿದಂತೆ 54 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಸೋಂಕಿತರ ಪೈಕಿ ಈಗಾಗಲೇ 1,146 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 484 ಸಕ್ರಿಯ ಪ್ರಕರಣಗಳು ಇವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 507 ಕಂಟೈನ್‌ಮೆಂಟ್‌ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ 12,073 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಇನ್ನೂ 6,120 ಜನರ ವರದಿ ಬರುವುದು ಬಾಕಿ ಇದೆ.

ಮೂವರು ಸಾವು:

ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದವರಲ್ಲಿ ಮೂವರು ಚಿಕಿತ್ಸೆಗೆ ಸ್ಪಂದಿಸದೇ ಬುಧವಾರ ಮೃತಪಟ್ಟಿದ್ದಾರೆ. ಇದರಿಂದ ಮೃತರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.

ಚಿತ್ರದುರ್ಗ ನಗರದ ಚೇಳುಗುಡ್ಡದ 82 ವರ್ಷದ ವ್ಯಕ್ತಿ, ಕರುವಿನಕಟ್ಟೆ ವೃತ್ತದ 70 ವರ್ಷದ ಮಹಿಳೆ ಹಾಗೂ ಹಿರಿಯೂರು ಪಟ್ಟಣದ 44 ವರ್ಷದ ಪುರಷ ಮೃತಪಟ್ಟವರು. 82 ವರ್ಷದ ವೃದ್ಧ ಹಾಗೂ 70 ವರ್ಷದ ಮಹಿಳೆ ಆ.18ರಂದು ಆಸ್ಪತ್ರೆಗೆ ದಾಖಲಾಗಿದ್ದರು. 44 ವರ್ಷದ ಪುರಷ ಆ.14ರಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಮೂಲಗಳು ಮಾಹಿತಿ ನೀಡಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು