ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: 71 ಜನರು ಕೋವಿಡ್‌ನಿಂದ ಗುಣಮುಖ

ಸೋಂಕು ಪರೀಕ್ಷೆ ವಿಳಂಬ: 5,606 ಜನರ ವರದಿ ನಿರೀಕ್ಷೆ
Last Updated 17 ಆಗಸ್ಟ್ 2020, 17:38 IST
ಅಕ್ಷರ ಗಾತ್ರ

ಚಿತ್ರದುರ್ಗ: ಜಿಲ್ಲೆಯಲ್ಲಿ ಒಂದೇ ದಿನ 71 ಜನರು ಕೋವಿಡ್‌ನಿಂದ ಗುಣಮುಖರಾಗಿದ್ದು, 21 ಜನರಿಗೆ ಕೊರೊನಾ ಸೋಂಕು ತಗುಲಿದೆ.

ಸೋಂಕಿತರ ಸಂಖ್ಯೆ 1,551ಕ್ಕೆ ಏರಿಕೆಯಾಗಿದೆ. ಗುಣಮುಖರಾಗಿ ಬಿಡುಗಡೆಯಾದವರ ಸಂಖ್ಯೆ 1065ಕ್ಕೆ ಹೆಚ್ಚಿದೆ. ಸದ್ಯ ಜಿಲ್ಲೆಯಲ್ಲಿ 466 ಸಕ್ರಿಯ ಪ್ರಕರಣಗಳಿವೆ.

ಸೋಮವಾರ 377 ಜನರ ಗಂಟಲು, ಮೂಗು ದ್ರವದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ 21 ಜನರಲ್ಲಿ ಕೋವಿಡ್ ದೃಢಪಟ್ಟಿದೆ. ಹೊಳಲ್ಕೆರೆ ತಾಲ್ಲೂಕಿನಲ್ಲಿ 17 ಪ್ರಕರಣ ಬೆಳಕಿಗೆ ಬಂದಿವೆ. ಮೊಳಕಾಲ್ಮುರು 1 ಹಾಗೂ ಚಳ್ಳಕೆರೆ ತಾಲ್ಲೂಕಿನಲ್ಲಿ 3 ಪ್ರಕರಣ ದೃಢಪಟ್ಟಿವೆ.

ಜಿಲ್ಲೆಯಲ್ಲಿ 20 ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಸದ್ಯ ಜಿಲ್ಲೆಯಲ್ಲಿ 459 ಕಂಟೈನ್‌ಮೆಂಟ್‌ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ 10,102 ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

ಈವರೆಗೆ 30,068 ಜನರ ಮಾದರಿ ಸಂಗ್ರಹಿಸಲಾಗಿದ್ದು, 22,572 ಜನರ ವರದಿ ನೆಗೆಟಿವ್ ಬಂದಿದೆ. ಉಳಿದ 5,606 ಜನರ ವರದಿ ಬರುವುದು ಬಾಕಿ ಇದೆ. ದಿನ ಕಳೆದಂತೆ ಸೋಂಕು ಪರೀಕ್ಷೆ ವಿಳಂಬವಾಗುತ್ತಿದೆ.

ರ‍್ಯಾಪಿಡ್‌ ಆಂಟಿಜನ್‌ ಕಿಟ್‌ನಲ್ಲಿ 124 ಸೋಂಕಿತರು ಮತ್ತು 73 ಜನರನ್ನು ಪಿಸಿಆರ್‌ ಟೆಸ್ಟ್‌ಗೆ ಒಳಪಡಿಸಲಾಗಿದೆ. ನಿತ್ಯ ಸರಾಸರಿ 300 ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಆದರೆ, ಅದೇ ಪ್ರಮಾಣದ ವರದಿ ಮಾತ್ರ ಕೈಸೇರುತ್ತಿಲ್ಲ. ಇದರಿಂದ ಪರೀಕ್ಷೆಗೆ ಮಾದರಿಯನ್ನು ನೀಡಿದವರು ಆತಂಕದಲ್ಲಿ ಇರುವಂತಾಗಿದೆ.

‘ದಿಶಾ’ ಸಭೆ ರದ್ದು:

ಸಂಸದ ಎ.ನಾರಾಯಣಸ್ವಾಮಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯಿತಿಯಲ್ಲಿ ಸೋಮವಾರ ನಡೆಯಬೇಕಿದ್ದ ಕೇಂದ್ರ ಸರ್ಕಾರಿ ಪುರಸ್ಕೃತ ಯೋಜನೆಗಳ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ (ದಿಶಾ) ಕೋವಿಡ್‌ ಕಾರಣಕ್ಕೆ ರದ್ದಾಯಿತು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ ಅವರಿಗೆ ಸೋಂಕು ಕಾಣಿಸಿಕೊಂಡಿದೆ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ.ಯೋಗೇಶ್‌ ಸೇರಿ ಹಲವರು ಪ್ರಾಥಮಿಕ ಸಂಪರ್ಕಿತರ ಪಟ್ಟಿಯಲ್ಲಿದ್ದಾರೆ. 20ಕ್ಕೂ ಹೆಚ್ಚು ಅಧಿಕಾರಿಗಳು ಕ್ವಾರಂಟೈನ್‌ಗೆ ಒಳಗಾಗಿದ್ದರಿಂದ ಸಭೆಯನ್ನು ರದ್ದುಪಡಿಸಲಾಯಿತು.

‘ಉಪ ಕಾರ್ಯದರ್ಶಿಗೆ ಸೋಂಕು ಕಾಣಿಸಿಕೊಂಡಿದ್ದರಿಂದ ನಾನೂ ಸೇರಿ ಹಲವರು ಕ್ವಾರಂಟೈನ್‌ಗೆ ಒಳಗಾಗಿದ್ದೇವೆ. ಕಚೇರಿಯನ್ನು ಸ್ಯಾನಿಟೈಸ್‌ ಮಾಡಲಾಗಿದೆ. ಪ್ರಾಥಮಿಕ ಸಂಪರ್ಕಿತರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿ ನೆಗೆಟಿವ್ ಎಂದಿದೆ. ಮಂಗಳವಾರದಿಂದ ಕಚೇರಿ ಎಂದಿನಂತೆ ತೆರೆಯಲಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಟಿ.ಯೋಗೇಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT