ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ಸಚಿವ ಎಚ್.ಆಂಜನೇಯಗೆ ಕೋವಿಡ್

Last Updated 24 ಏಪ್ರಿಲ್ 2021, 17:25 IST
ಅಕ್ಷರ ಗಾತ್ರ

ಚಿತ್ರದುರ್ಗ: ಮಾಜಿ ಸಚಿವ ಎಚ್. ಆಂಜನೇಯ ಮತ್ತು ಅವರ ಪತ್ನಿ ವಿಜಯ ಆಂಜನೇಯ ಅವರಿಗೆ ‘ಕೋವಿಡ್’ ದೃಢಪಟ್ಟಿದ್ದು, ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

‘ಕಳೆದ ಎರಡು ದಿನಗಳಿಂದ ಇಬ್ಬರಲ್ಲೂ ಕೋವಿಡ್‌ ಲಕ್ಷಣಗಳು ಕಂಡು ಬಂದಿದ್ದು, ಕೂಡಲೇ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದೇವೆ. ಪರೀಕ್ಷೆಗೆ ಒಳಪಟ್ಟಾಗ ಸೋಂಕು ದೃಢಪಟ್ಟಿದೆ. ನನ್ನ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಪ್ರತಿಯೊಬ್ಬರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಎಚ್. ಆಂಜನೇಯ ಮನವಿ ಮಾಡಿದ್ದಾರೆ.

‘ಕೋವಿಡ್ ಮಾರ್ಗಸೂಚಿ ಪಾಲಿಸಲು ಎಲ್ಲರೂ ಮುಂದಾಗಬೇಕು. ಕಡ್ಡಾಯವಾಗಿ ಮಾಸ್ಕ್‌ ಧರಿಸುವುದರ ಜತೆಗೆ ಅಂತರ ಕಾಯ್ದುಕೊಳ್ಳಬೇಕು. ಆಗ ಮಾತ್ರ ಇದರಿಂದ ದೂರ ಉಳಿಯಲು ಸಾಧ್ಯ. ಈ ಕುರಿತು ಎಚ್ಚರವಹಿಸಿ’ ಎಂದು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT