ಶನಿವಾರ, ಜುಲೈ 31, 2021
27 °C

ಗೃಹರಕ್ಷಕ ದಳದ ಸಿಬ್ಬಂದಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಕರ್ತವ್ಯ ನಿರ್ವಹಿಸಿ ಮನೆಗೆ ಮರಳಿದ ಗೃಹರಕ್ಷಕ ದಳದ ಟಿ.ರೂಪಾ (35) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೂಪಾ ಅವರು ನಾಲ್ಕು ವರ್ಷಗಳಿಂದ ಗೃಹ ರಕ್ಷಕ ದಳದಲ್ಲಿ ಕೆಲಸ ಮಾಡುತ್ತಿದ್ದರು. ಶುಕ್ರವಾರ ಬೆಳಿಗ್ಗೆ ನ್ಯಾಯಾಲಯದ ಸಮೀಪ ಸಂಚಾರ ನಿಯಂತ್ರಣದ ಕರ್ತವ್ಯ ನಿರ್ವಹಿಸಿ ಮನೆಗೆ ಮರಳಿದ್ದರು.

ಮಕ್ಕಳು ಮನೆಯ ಹೊರಗೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಬಾಗಿಲು ಹಾಕಿಕೊಂಡು ನೇಣಿಗೆ ಶರಣಾಗಿದ್ದಾರೆ. ಮಕ್ಕಳು ಹಾಗೂ ಸಂಬಂಧಿಯೊಬ್ಬರು ಮನೆಗೆ ಮರಳಿದಾಗ ಬಾಗಿಲು ತೆರೆಯದಿರುವುದನ್ನು ಕಂಡು ಅನುಮಾನವಾಗಿದೆ. ಕಿಟಕಿ ಮೂಲಕ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸಾವಿಗೂ ಮುನ್ನ ಬರೆದಿಟ್ಟ ಪತ್ರದಲ್ಲಿ ತಿಳಿಸಿದ್ದಾರೆ. ರೂಪಾ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಈ ಸಂಬಂಧ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು