ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ | ಸಿಲಿಂಡರ್‌ ಸ್ಫೋಟ: ಒಮ್ನಿ ಭಸ್ಮ

Published 12 ಸೆಪ್ಟೆಂಬರ್ 2023, 14:47 IST
Last Updated 12 ಸೆಪ್ಟೆಂಬರ್ 2023, 14:47 IST
ಅಕ್ಷರ ಗಾತ್ರ

ಚಿತ್ರದುರ್ಗ: ಒಮ್ನಿಯಲ್ಲಿದ್ದ ಸಿಲಿಂಡರ್‌ ಸ್ಫೋಟಗೊಂಡು ಬೆಂಕಿಗೆ ಆಹುತಿಯಾದ ಘಟನೆ ನಗರದ ಫಿಲ್ಟರ್‌ ಹೌಸ್‌ ಸಮೀಪ ಮಂಗಳವಾರ ನಡೆದಿದೆ. ಘಟನೆಯಲ್ಲಿ ಎರಡು ದ್ವಿಚಕ್ರ ವಾಹನಗಳಿಗೂ ಹಾನಿಯಾಗಿದೆ.

ಇಲ್ಲಿನ ಫಿಲ್ಟರ್‌ಹೌಸ್‌ ಬಡಾವಣೆಯ ಇಸ್ಮಾಯಿಲ್ ಎಂಬುವರಿಗೆ ಸೇರಿದ ಒಮ್ನಿಗೆ ಸಿಲಿಂಡರ್ ಅಳವಡಿಸಲಾಗಿತ್ತು. ಅನಿಲ ಸೋರಿಕೆಯಾಗಿ ಏಕಾಏಕಿ ಬೆಂಕಿಹೊತ್ತಿಕೊಂಡು ಸ್ಫೋಟಗೊಂಡಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಗಾಬರಿಗೊಂಡ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತುಸೇವಾ ಸಿಬ್ಬಂದಿ ಬೆಂಕಿ ಆರಿಸಿದ್ದಾರೆ.

ಸಿಲಿಂಡರ್‌ ಸ್ಫೋಟಕ್ಕೆ ಸ್ಥಳೀಯರು ಗಾಬರಿಗೊಂಡಿದ್ದಾರೆ. ಒಮ್ನಿ ಸಮೀಪದಲ್ಲಿಯೇ ಇದ್ದ ಎರಡು ದಿಚಕ್ರ ವಾಹನಗಳು ಕೂಡ ಬೆಂಕಿಗೆ ಆಹುತಿಯಾಗಿವೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸುವಲ್ಲಿ ವಿಳಂಬ ಮಾಡಿದರು ಎಂದು ಸ್ಥಳೀಯರು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT