ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಳ್ಳಕೆರೆ | ಹಳೆಯ ಪ್ರಕರಣಕ್ಕೆ ರಾಜಕೀಯ ಲೇಪ ಬೇಡ: ಜಿ.ವೆಂಕಟೇಶ್

Published 14 ಸೆಪ್ಟೆಂಬರ್ 2023, 16:03 IST
Last Updated 14 ಸೆಪ್ಟೆಂಬರ್ 2023, 16:03 IST
ಅಕ್ಷರ ಗಾತ್ರ

ಚಳ್ಳಕೆರೆ: ಒಂಬತ್ತು ವರ್ಷದ ಹಿಂದಿನ ವ್ಯವಹಾರಿಕ ಪ್ರಕರಣವನ್ನು ರಾಜಕೀಯ ಪ್ರೇರಿತಗೊಳಿಸಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರ ತೇಜೋವಧೆ ಮಾಡಲಾಗುತ್ತಿದೆ ಎಂದು ಕರ್ನಾಟಕ ಕನ್ನಡ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ವೆಂಕಟೇಶ್ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಸುಧಾಕರ್ ಅವರು ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಪರವಾಗಿದ್ದಾರೆ ಎಂದರು.

ಸುಧಾಕರ್ ಅವರು ಚಳ್ಳಕೆರೆ ಹಾಗೂ ಹಿರಿಯೂರು ಕ್ಷೇತ್ರದಲ್ಲಿ ದಲಿತ ಸಮುದಾಯದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸುತ್ತಿದ್ದಾರೆ. ಅವರ ಜನಪರ ಆಡಳಿತ ಸಹಿಸದ ಬಿಜೆಪಿಯವರು ಭೂಕಳಿಕೆಯ ಸುಳ್ಳು ಆರೋಪ ಹೊರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಚೌಳೂರು ಪ್ರಕಾಶ್ ಹೇಳಿದರು.

ಚನ್ನಮ್ಮನಾಗತಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಆನಂದಕುಮಾರ್ ಮಾತನಾಡಿ, ‘ರಾಜಕೀಯವೇ ಬೇರೆ, ವ್ಯವಹಾರವೇ ಬೇರೆ. ಇತ್ತೀಚಿನ ದಿನದಲ್ಲಿ ಭೂಮಿಯ ಬೆಲೆ ಏರಿಕೆ ಆಗಿದ್ದರಿಂದ ಹಣದ ಆಸೆಗೆ ಉದ್ದೇಶಪೂರ್ವಕವಾಗಿ ಹಳೆಯ ಪ್ರಕರಣವನ್ನು ಮುನ್ನಲೆಗೆ ತರಲಾಗಿದೆ’ ಎಂದರು. 

ನಗರಸಭೆ ಮಾಜಿ ಸದಸ್ಯ ಚೇತನ್‍ಕುಮಾರ್, ತಳಕು ಹೋಬಳಿ ಎಸ್ಟಿ ವಿಭಾಗದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಓಬಳೇಶ್, ಎಂ.ತಿಪ್ಪೇಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT