ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಷ್ಕೃತ ಪಠ್ಯಪುಸ್ತಕ ರದ್ದುಗೊಳಿಸಿ: ದಲಿತ ಸಂಘರ್ಷ ಸಮಿತಿ ಒತ್ತಾಯ

Last Updated 2 ಜುಲೈ 2022, 3:58 IST
ಅಕ್ಷರ ಗಾತ್ರ

ಚಿತ್ರದುರ್ಗ: ಪರಿಷ್ಕರಣೆಗೊಂಡಿರುವ ಪಠ್ಯಪುಸ್ತಕವನ್ನು ಕೂಡಲೇ ರದ್ದುಗೊಳಿಸಿ ಹಳೇ ಪಠ್ಯಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿತು.

ಇಲ್ಲಿನ ಒನಕೆ ಓಬವ್ವ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ‘ರೋಹಿತ್‌ ಚಕ್ರತೀರ್ಥ ಶಿಕ್ಷಣ ತಜ್ಞ ಅಲ್ಲದಿದ್ದರೂ ಸರ್ಕಾರ ಅವರಿಂದ ಪಠ್ಯಪುಸ್ತಕ ಪರಿಷ್ಕರಣೆ ಮಾಡಿಸಿದ್ದು, ನೂರಾರು ಸಮಸ್ಯೆಗಳ ಸೃಷ್ಟಿಗೆ ಕಾರಣವಾಗಿದೆ. ಕೂಡಲೇ ಪಠ್ಯಪುಸ್ತಕವನ್ನು ರದ್ದುಗೊಳಿಸಿ ಬರಗೂರು ರಾಮಚಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ಪರಿಷ್ಕರಣೆಗೊಂಡಿರುವ ಪಠ್ಯವನ್ನು ಶಾಲೆಗಳಿಗೆ ಒದಗಿಸಬೇಕು’ ಎಂದು ಆಗ್ರಹಿಸಿದರು.

‘ಪರಿಶಿಷ್ಟ ಜಾತಿ, ಪಂಗಡಕ್ಕೆ ಕಾಯ್ದಿರಿಸಿರುವ ಹಣದ ದುರುಪಯೋಗವನ್ನು ತಡೆಗಟ್ಟಬೇಕು. ಕಾಯ್ದೆಯಲ್ಲಿರುವ ದಲಿತ ವಿರೋಧಿ ಸೆಕ್ಷನ್ 7(ಡಿ) ರದ್ದಾಗಬೇಕು. ಮಲೆನಾಡು ಭಾಗಗಳಲ್ಲಿ ಕಾಫಿ ಪ್ಲಾಂಟರ್‌ಗಳು ಒತ್ತುವರಿ ಮಾಡಿರುವ ಭೂಮಿಯನ್ನು ತೆರವುಗೊಳಿಸಿ, ಭೂಹೀನರಿಗೆ ಹಂಚಬೇಕು’ ಎಂದು ಒತ್ತಾಯಿಸಿದರು.

‘ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡಬೇಕು. ಹಾಸ್ಟೆಲ್‍ಗಳಿಗೆ ಮೂಲಸೌಕರ್ಯ ಒದಗಿಸಬೇಕು. ಮೀಸಲಾತಿ ಹೆಚ್ಚಳಕ್ಕೆ ಸಂಬಂಧಪಟ್ಟಂತೆ ನ್ಯಾಯಮೂರ್ತಿ ಸುಭಾಷ್ ಅಡಿಯವರ ಶಿಫಾರಸು ಅಂತಿಮಗೊಂಡಿದ್ದು, ಸರ್ಕಾರ ಕೂಡಲೇ ಸ್ವೀಕರಿಸಬೇಕು’ ಎಂದು ಮನವಿ ಮಾಡಿದರು.

ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಸಮಿತಿ ಜಿಲ್ಲಾ ಪ್ರಧಾನ ಸಂಚಾಲಕ ದಯಾನಂದ, ಜಿಲ್ಲಾ ಸಂಚಾಲಕರಾದ ರವೀಂದ್ರ, ಮಲ್ಲಿಕಾರ್ಜುನ, ರಘು, ಶ್ರೀಧರ್, ಬಾಬು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT