ಮಾಯಕೊಂಡ: ಸೋಮವಾರ ರಾತ್ರಿ ಬೀಸಿದ ಭಾರೀ ಬಿರುಗಾಳಿಗೆ ಆನಗೋಡು ಹೋಬಳಿಯಲ್ಲಿ ಬಾಳೆ ಗಿಡಗಳು ನೆಲಕ್ಕುರುಳಿವೆ.

ಸಮೀಪದ ಕೆರೆಯಾಗಳಹಳ್ಳಿ ಗ್ರಾಮದ ರೈತ ನಾಗಣ್ಣ ಅವರ ತೋಟದಲ್ಲಿ ಗಾಳಿಯ ರಭಸದಿಂದ ಬಾಳೆ ಗಿಡಗಳು ಹಾಗೂ ಅಡಿಕೆ ಮರಗಳು ಮುರಿದಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ತೋಟಗಾರಿಕೆ ಇಲಾಖೆ ಅಧಿಕಾರಿಗಳೊಂದಿಗೆ ಶಾಸಕ ಕೆ.ಎಸ್.ಬಸವಂತಪ್ಪ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

‘ಈ ಹಿಂದೆ ಆಲಿಕಲ್ಲು ಮಳೆ ಸುರಿದಿದ್ದರಿಂದ ಬಾಳೆ ಗಿಡಗಳಿಗೆ ಸಣ್ಣಪುಟ್ಟ ಹಾನಿಯಾಗಿತ್ತು. ಆದರೆ ಸೋಮವಾರ ರಾತ್ರಿ ಬೀಸಿದ ಭಾರೀ ಬಿರುಗಾಳಿಗೆ ತೋಟದ ಎಲ್ಲ ಬಾಳೆ ಗಿಡಗಳೂ ನೆಲಕ್ಕುರುಳಿವೆ. ಆರ್ಥಿಕ ಮೂಲವಾಗಿದ್ದ ಬಾಳೆ ಗಿಡಗಳು ಹಾಳಾಗಿರುವುದರಿಂದ ದಿಕ್ಕು ತೋಚದಂತಾಗಿದೆ’ ಎಂದು ರೈತ ನಾಗಣ್ಣ ಅವರು ಶಾಸಕರು ಮತ್ತು ತೋಟಗಾರಿಕೆ ಅಧಿಕಾರಿಗಳ ಬಳಿ ಅಳಲು ತೋಡಿಕೊಂಡರು.

ಹಾನಿ ಬಗ್ಗೆ ಮೇಲಧಿಕಾರಿಗಳಿಗೆ ವರದಿ ನೀಡಿ, ರೈತರಿಗೆ ಪರಿಹಾರ ನೀಡುವಂತೆ ಸ್ಥಳದಲ್ಲಿದ್ದ ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕಿ ರೇಷ್ಮಾ ಪರ್ವಿನ್ ಅವರಿಗೆ ಶಾಸಕ ಕೆ.ಎಸ್.ಬಸವಂತಪ್ಪ ಸೂಚಿಸಿದರು.

ತೋಟಗಾರಿಕೆ ಇಲಾಖೆ ಅಧಿಕಾರಿ ಅರುಣ್ ರಾಜ್, ಕಂದಾಯ ನಿರೀಕ್ಷಕ ಬಸವರಾಜ್, ಗ್ರಾಮ ಲೆಕ್ಕಾಧಿಕಾರಿ ರೇಖಾ, ಎಪಿಎಂಸಿ ಮಾಜಿ ಅಧ್ಯಕ್ಷ ಅಣಜಿ ಎಸ್.ಕೆ.ಚಂದ್ರಣ್ಣ, ರೈತರಾದ ಹಾಲೇಶ್, ನಾಗಣ್ಣ, ಷಣ್ಮುಖಪ್ಪ, ಗುರುಸಿದ್ದಪ್ಪ, ಡಿ.ಎಚ್.ಕರಿಯಪ್ಪ, ಅಂಜಿನಪ್ಪ, ರಾಜಣ್ಣ, ದುರುಗಪ್ಪ, ಹನುಮಂತಪ್ಪ, ಕುಬೇರಪ್ಪ ಹಾಗೂ ಗ್ರಾಮಸ್ಥರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.