ಭಾನುವಾರ, ಏಪ್ರಿಲ್ 11, 2021
27 °C

ಶೇಷಪ್ಪನಹಳ್ಳಿಯಲ್ಲಿ ಜಿಲ್ಲಾಧಿಕಾರಿ ವಾಸ್ತವ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಶೇಷಪ್ಪನಹಳ್ಳಿಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ ಅವರು ಮಾರ್ಚ್‌ 20ರಂದು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಭೂದಾಖಲೆ ವಿಭಾಗದ ಉಪನಿರ್ದೇಶಕರು ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಗ್ರಾಮದ ಜನರ ಸಮಸ್ಯೆಗಳಿಗೆ ಪರಿಹಾರ ನೀಡಲಿದ್ದಾರೆ.

ಪ್ರತಿ ತಿಂಗಳು ಮೂರನೇ ಶನಿವಾರ ಜಿಲ್ಲಾಧಿಕಾರಿ ಸೇರಿ ಇತರ ಅಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಸಾರ್ವಜನಿಕರ ಅಹವಾಲು ಮತ್ತು ಬೇಡಿಕೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡುವ ನಿಟ್ಟಿನಲ್ಲಿ ಕಂದಾಯ ಇಲಾಖೆ ಇದನ್ನು ಕಡ್ಡಾಯಗೊಳಿಸಿದೆ.

ವಾಸ್ತವ್ಯಕ್ಕೆ ಪೂರ್ವಭಾವಿಯಾಗಿ ಗ್ರಾಮದಲ್ಲಿ ನಡೆಸ ಸಭೆಯಲ್ಲಿ 88 ಅಹವಾಲುಗಳು ಸಲ್ಲಿಕೆಯಾಗಿವೆ. ತಹಶೀಲ್ದಾರ್ ಗ್ರಾಮಕ್ಕೆ ಭೇಟಿ ನೀಡಿ ಅಹವಾಲು ಸ್ವೀಕರಿಸಿದ್ದಾರೆ. ವಿದ್ಯುತ್ ಸಂಪರ್ಕ, ನೀರಿನ ಟ್ಯಾಂಕ್, ರಸ್ತೆ ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ 83 ಅರ್ಜಿಗಳು ಸಲ್ಲಿಕೆಯಾಗಿವೆ. ಪಡಿತರ ವಿತರಣೆ, ಕುಡಿಯುವ ನೀರು ಮತ್ತು ‘ಬೆಸ್ಕಾಂ’ಗೆ ಸಂಬಂಧಿಸಿದ ಸಮಸ್ಯೆಗಳನ್ನು ಜನರು ನೀಡಿದ್ದಾರೆ.

ಚಿತ್ರದುರ್ಗ ತಾಲ್ಲೂಕಿನ ಶೀಗೇಹಳ್ಳಿ, ಚಳ್ಳಕೆರೆ ತಾಲ್ಲೂಕಿನ ಸಿದ್ದೇಶ್ವರನದುರ್ಗ, ಹೊಸದುರ್ಗ ತಾಲ್ಲೂಕಿನ ನಾಗನಾಯ್ಕನಹಟ್ಟಿ, ಹೊಳಲ್ಕೆರೆ ತಾಲ್ಲೂಕಿನ ಚಿಕ್ಕನಕಟ್ಟೆ, ಮೊಳಕಾಲ್ಮೂರು ತಾಲ್ಲೂಕಿನ ಸೂರಮ್ಮನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ತಹಶೀಲ್ದಾರ್‌ ವಾಸ್ತವ್ಯ ಮಾಡುವರು. ರಸ್ತೆ, ಕುಡಿಯುವ ನೀರು, ರುದ್ರಭೂಮಿ ಸೇರಿ ಇತರ ಸೌಲಭ್ಯಗಳ ಬಗ್ಗೆ ಸಾರ್ವಜನಿಕರು ಅಹವಾಲು ಸಲ್ಲಿಸಲು ಅವಕಾಶವಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು