ಹೊಳಲ್ಕೆರೆ: ವಾಕ್ ಮತ್ತು ಶ್ರವಣ ದೋಷವುಳ್ಳ ಮಹಿಳೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿದ ಘಟನೆ ತಾಲ್ಲೂಕಿನ ರಾಮಗಿರಿ ಹೋಬಳಿ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಗುರುವಾರ ರಾತ್ರಿ ನಡೆದಿದೆ.

ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಚಿತ್ರದುರ್ಗ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದ ನಾಗೇಶ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆಯ ತವರು ಮನೆಗೆ ಹೋಗಿದ್ದ ಮಹಿಳೆ ಗುರುವಾರ ರಾತ್ರಿ ಕೊನೆಯ ಬಸ್ಸಿಗೆ ಗ್ರಾಮಕ್ಕೆ ಬಂದಿದ್ದಾರೆ. ಬಸ್ ನಿಲ್ದಾಣದಿಂದ ಸುಮಾರು 200 ಮೀಟರ್ ದೂರದಲ್ಲಿದ್ದ ಮನೆಗೆ ಒಂಟಿಯಾಗಿ ನಡೆದು ಹೋಗುವಾಗ ಹಿಂದಿನಿಂದ ಬಂದ ವ್ಯಕ್ತಿ ಅತ್ಯಾಚಾರ ನಡೆಸಿದ್ದಾನೆ. ಮಹಿಳೆಗೆ ದೈಹಿಕ ಹಲ್ಲೆ ನಡೆಸಿದ್ದು, ಮೈಯಲ್ಲಿ ಗಾಯಗಳಾಗಿವೆ. ಮಹಿಳೆಯನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ತಪಾಸಣೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಶುಕ್ರವಾರ ಸಾರ್ವಜನಿಕ ಆಸ್ಪತ್ರೆಯ ಮುಂದೆ ಸೇರಿದ ಸಾರ್ವಜನಿಕರು ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದರು. ಆರೋಪಿಯನ್ನು ಠಾಣೆಗೆ ಕರೆದೊಯ್ಯುವಾಗ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಜನರು ಆರೋಪಿಯನ್ನು ಥಳಿಸಲು ಮುಂದಾದಾಗ ಪೊಲೀಸರು ಲಾಠಿಚಾರ್ಚ್ ಮಾಡಿ ಜನರನ್ನು ಚದುರಿಸಿದರು.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.