ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಶುರಾಂಪುರ: ವ್ಯಕ್ತಿ ಮೇಲೆ ಮರಣಾಂತಿಕ ಹಲ್ಲೆ

Published 25 ಫೆಬ್ರುವರಿ 2024, 15:31 IST
Last Updated 25 ಫೆಬ್ರುವರಿ 2024, 15:31 IST
ಅಕ್ಷರ ಗಾತ್ರ

ಪರಶುರಾಂಪುರ: ಗ್ರಾಮದ ಹಳೆಕೆರೆ ಬಳಿ ವ್ಯಕ್ತಿಯೊಬ್ಬರ ಮೇಲೆ ಮಚ್ಚಿನಿಂದ ಮರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಶನಿವಾರ ನಡೆದಿದೆ.

ಹುಡಗ-ಹುಡುಗಿ ಜಗಳವಾಡುತ್ತಿದ್ದುದ್ದನ್ನು ಬಿಡಿಸಲು ಹೋದ ಬೋರೇಶ (35) ಅವರ ತಲೆಯ ಹಿಂಬದಿಗೆ ದೊಡ್ಡಗೊಲ್ಲರಹಟ್ಟಿಯ ದರ್ಶನ್ (20) ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ.

ಹಲ್ಲೆಗೊಳಗಾದ ಬೋರೇಶ ದೊಡ್ಡಉಳ್ಳಾರ್ಥಿ ನಿವಾಸಿಯಾಗಿದ್ದು, ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ ಎನ್ನಲಾಗಿದೆ.

ಆರೋಪಿ ದರ್ಶನ್‌ ವಿರುದ್ಧ ಪರಶುರಾಂಪುರ ಠಾಣೆಯಲ್ಲಿ ದಾಖಲಾಗಿದೆ. ಪರಶುರಾಂಪುರ ಪೋಲಿಸರು ಆರೋಪಿಯನ್ನು ಬಂಧಿಸಿ, ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT