ಚಿತ್ರದುರ್ಗ: ಮಾರ್ಕಾಂಡಮುನಿ ಸ್ವಾಮೀಜಿ ನಿಧನ

ಹಿರಿಯೂರು: ತಾಲ್ಲೂಕಿನ ಕೋಡಿಹಳ್ಳಿ ಆದಿಜಾಂಬವ ಮಹಾಸಂಸ್ಥಾನದ ಮಾರ್ಕಾಂಡಮುನಿ ಸ್ವಾಮೀಜಿ (70) ಗುರುವಾರ ಹೃದಯಾಘಾತದಿಂದ ಲಿಂಗೈಕ್ಯರಾದರು.
ಆರೋಗ್ಯದಲ್ಲಿ ಏರುಪೇರು ಕಂಡ ತಕ್ಷಣ ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಗೆ ಭಕ್ತರು ಕರೆ ತಂದರು. ಆಸ್ಪತ್ರೆಗೆ ಬರುವ ವೇಳೆಗೆ ಸ್ವಾಮೀಜಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು. ಮಠದಲ್ಲಿ ಶುಕ್ರವಾರ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಆದಿಜಾಂಬವ ಶಾಖಾ ಮಠದ ಸ್ವಾಮೀಜಿಗಳ ಜೊತೆ ಚರ್ಚಿಸಿ ಮಠದ ಆವರಣದಲ್ಲಿ ಅಂತ್ಯಕ್ರಿಯೆ ಕುರಿತು ನಿರ್ಧರಿಸಲಾಗುವುದು ಎಂದು ಶಿವಮುನಿ ಸ್ವಾಮೀಜಿ ಹಾಗೂ ಷಡಕ್ಷರಮುನಿ ಸ್ವಾಮೀಜಿ ತಿಳಿಸಿದ್ದಾರೆ. ಮಾರ್ಕಾಂಡಮುನಿ ಸ್ವಾಮೀಜಿ ಅವರು ಆದಿಜಾಂಬವ ಸಮಾಜದ ಸಂಘಟನೆಯಲ್ಲಿ ತೊಡಗಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.