ಶನಿವಾರ, ಜೂನ್ 25, 2022
24 °C

ಸಾಲದ ವಿಚಾರ: ಸ್ನೇಹಿತನ ಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ನಗರದ ಕಾಮನಬಾವಿ ಬಡಾವಣೆಯಲ್ಲಿ ಸಾಲದ ವಿಚಾರವಾಗಿ ಸ್ನೇಹಿತರಿಬ್ಬರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಮಹಮ್ಮದ್ ಅಲಿ (30) ಮೃತಪಟ್ಟವರು. ಆರೋಪಿ ಖಾದರ್‌ ಬಾಷಾನನ್ನು ಪೊಲೀಸರು ಬಂಧಿಸಿದ್ದಾರೆ. ಕಾಮನಬಾವಿ ಬಡಾವಣೆಯ ನಿವಾಸಿಗಳಾದ ಈ ಇಬ್ಬರು ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

ಖಾದರ್‌ ಬಾಷಾ ಸ್ನೇಹಿತನಾದ ಅಲಿ ಬಳಿ ₹ 1 ಸಾವಿರವನ್ನು ಸಾಲವಾಗಿ ಪಡೆದಿದ್ದ. ಗುರುವಾರ ಸಂಜೆ ಸಾಲದ ಹಣ ಹಿಂತಿರುಗಿಸುವ ವಿಚಾರದಲ್ಲಿ ಖಾದರ್‌ ಬಾಷಾ ಅಲಿ ಜತೆ ಜಗಳವಾಡಿ ಇಟ್ಟಿಗೆಯಿಂದ ಹಲ್ಲೆ ನಡೆಸಿದ್ದನು. ತೀವ್ರ ಗಾಯಗೊಂಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಅಲಿ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.