ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯೂರು | ವಿಕೃತ ಮನಸ್ಸಿನ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

Published 30 ಡಿಸೆಂಬರ್ 2023, 13:03 IST
Last Updated 30 ಡಿಸೆಂಬರ್ 2023, 13:03 IST
ಅಕ್ಷರ ಗಾತ್ರ

ಹಿರಿಯೂರು: ಮುಸ್ಲಿಂ ಸಮುದಾಯದ ಮಹಿಳೆಯರ ಬಗ್ಗೆ ಅವಹೇಳನಕಾರಿ ಮಾತನಾಡುವುದರ ಮೂಲಕ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿರುವ ಪ್ರಭಾಕರ್ ಭಟ್ ವಿರುದ್ಧ ಸೂಕ್ತ ಕ್ರಮ ಕೈಗೊಂಡು ತಕ್ಷಣವೇ ಬಂಧಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಚಮನ್ ಷರೀಪ್ ಒತ್ತಾಯಿಸಿದ್ದಾರೆ.

‘ಭಾರತ ಜಾತ್ಯತೀತ ರಾಷ್ಟ್ರವಾಗಿದ್ದು, ಸೌಹಾರ್ದತೆಯಿಂದ ಬದುಕುತ್ತಿರುವ ಮುಸ್ಲಿಂ ಸಮುದಾಯದ ವಿರುದ್ಧ ನಿರಂತರವಾಗಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಇಂತವರನ್ನು ಬಂಧಿಸಬೇಕು. ಇಲ್ಲದಿದ್ದಲ್ಲಿ ಸಮಾಜದಲ್ಲಿ ಕೋಮು ಸೌಹಾರ್ದತೆ ನಾಶವಾಗಿ ಸಮಾಜ ಘಾತುಕ ಶಕ್ತಿ ಹುಟ್ಟಿಕೊಳ್ಳಲು ಕಾರಣವಾಗುತ್ತದೆ’ ಎಂದು ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT