ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳೆ ನಷ್ಟ ಪರಿಹಾರಕ್ಕೆ ಆಗ್ರಹ

ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕ‌ರ್ತರ ಪ್ರತಿಭಟನೆ
Last Updated 13 ಆಗಸ್ಟ್ 2022, 3:45 IST
ಅಕ್ಷರ ಗಾತ್ರ

ಚಿತ್ರದುರ್ಗ: ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆಹಾನಿಗೆ ಕೂಡಲೇ ಪರಿಹಾರ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕ‌ರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆಹಾನಿ ಉಂಟಾಗಿದೆ. ರೈತರು ಸತತ ಎರಡು ವರ್ಷ ಅತಿವೃಷ್ಟಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಸಮೀಕ್ಷೆ ನಡೆಸಿ ಪರಿಹಾರ ಬಿಡುಗಡೆ ಮಾಡಬೇಕು. ಬೆಳೆ ವಿಮಾ ಕಂತು ಪಾವತಿಸಿದ ಎಲ್ಲ ರೈತರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಕಳೆದ ವರ್ಷ ಅತಿವೃಷ್ಟಿಯಿಂದ ಬೆಳೆ ನಾಶವಾಗಿದೆ. ಸರ್ಕಾರ ಪರಿಹಾರವನ್ನು ಘೋಷಣೆ ಮಾಡಿ ಹಣ ಮಂಜೂರು ಮಾಡಿದರೂ ರೈತರಿಗೆ ಪರಿಹಾರ ಸಿಕ್ಕಿ‌ಲ್ಲ. ವಿಮಾ ಕಂಪನಿಗಳು ರೈತರಿಗೆ ಮೋಸ ಮಾಡುತ್ತಿವೆ ಎಂದು ಆರೋಪಿಸಿದರು.

ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ರೈತರು ಬೆಳೆದ ಬೆಳೆಗೆ ನ್ಯಾಯಯುತವಾದ ಬೆಲೆ ಸಿಗುತ್ತಿಲ್ಲ. ರೈತರೇ ಬೆಲೆ ನಿಗದಿ ಮಾಡುವ ಸ್ವಾತಂತ್ರ್ಯ ಇನ್ನೂ ಸಿಕ್ಕಿಲ್ಲ. ನ್ಯಾಯಯುತವಾದ ಬೆಲೆ ಸಿಗದೇ ಇರುವುದರಿಂದ ರೈತರು ಸಾಲಗಾರರಾಗುತ್ತಿದ್ದಾರೆ. ಬೆಳೆನಷ್ಟ ಸಂಭವಿಸಿದಾಗ ಪರಿಹಾರ ಸಿಗುವ ನಿರೀಕ್ಷೆ
ಯಲ್ಲಿ ವಿಮೆ ಕಂತು ಪಾವತಿಸಲಾಗುತ್ತಿದೆ.ಆದರೆ, ಪರಿಹಾರ ನೀಡುವಲ್ಲಿತಾರತಮ್ಯ ಮಾಡಲಾಗುತ್ತಿದೆಎಂದು ದೂರಿದರು.

ಸಂಘದ ಮುಖಂಡರಾದ ಈಚಘಟ್ಟ ಸಿದ್ಧವೀರಪ್ಪ, ಡಿ.ಎಸ್‌.ಹಳ್ಳಿ ಮಲ್ಲಿಕಾರ್ಜನ್, ರಾಮರೆಡ್ಡಿ, ಶಿವಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT