ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌.ಕಾಂತರಾಜ್‌ ವರದಿ ಜಾರಿಗೆ ಆಗ್ರಹ; ಸಿದ್ದರಾಮಯ್ಯ ಬೆಂಬಲಕ್ಕೆ ಸಜ್ಜಾದ ‘ಅಹಿಂದ’

ಶೋಷಿತರ ಜಾಗೃತಿ ಸಮಾವೇಶ ಜ.28ಕ್ಕೆ
Published 27 ಡಿಸೆಂಬರ್ 2023, 13:02 IST
Last Updated 27 ಡಿಸೆಂಬರ್ 2023, 13:02 IST
ಅಕ್ಷರ ಗಾತ್ರ

ಚಿತ್ರದುರ್ಗ: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ಎಚ್‌.ಕಾಂತರಾಜ್‌ ನಡೆಸಿದ ಜಾತಿ ಗಣತಿಯನ್ನು ಜಾರಿಗೊಳಿಸುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ತರಲು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟವು ‘ಶೋಷಿತರ ಜಾಗೃತಿ ಸಮಾವೇಶ’ವನ್ನು ಜ.28ರಂದು ಆಯೋಜಿಸಿದೆ.

ನಗರದ ಹೊರವಲಯದ ಮಾದಾರ ಚನ್ನಯ್ಯ ಗುರುಪೀಠದ ಸಮೀಪದ ವಿಶಾಲ ಜಾಗದಲ್ಲಿ ಸಮಾವೇಶ ಆಯೋಜಿಸಲು ಒಕ್ಕೂಟ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾವೇಶದ ಸಿದ್ಧತೆಗೆ ಸಂಬಂಧಿಸಿದ ಪೂರ್ವಭಾವಿ ಸಭೆ ಚಿತ್ರದುರ್ಗದಲ್ಲಿ ಬುಧವಾರ ನಡೆಯಿತು. ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆಯನ್ನು ಒಕ್ಕೂಟ ಹೊಂದಿದೆ.

‘ದಾವಣಗೆರೆಯಲ್ಲಿ ನಡೆದ ಪ್ರಬಲ ಜಾತಿಯೊಂದರ ಮಹಾ ಅಧಿವೇಶನದಲ್ಲಿ ಕಾಂತರಾಜ್‌ ವರದಿಗೆ ಆಕ್ಷೇಪ ವ್ಯಕ್ತಪಡಿಸಲಾಗಿದೆ. ಜಾತಿ ಗಣತಿ ವರದಿ ಬಗ್ಗೆ ಈ ಪರಿಯ ಭಯ ಏಕೆ ಎಂಬುದು ಇನ್ನೂ ಅರ್ಥವಾಗುತ್ತಿಲ್ಲ. ಜಾತಿ ಗಣತಿ ವರದಿಯನ್ನು ಸರ್ಕಾರ ಸ್ವೀಕರಿಸಿ ಯಥಾವತ್ತಾಗಿ ಜಾರಿಗೊಳಿಸಬೇಕು. ಸರ್ಕಾರದ ಮೇಲೆ ಒತ್ತಡ ತರುವ ಉದ್ದೇಶದಿಂದ ಸಮಾವೇಶ ಆಯೋಜಿಸಲಾಗಿದೆ’ ಎಂದು ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ ಸಭೆಯಲ್ಲಿ ವಿವರಿಸಿದರು.

‘ಪ್ರಬಲ ಜಾತಿಗಳ ದಬ್ಬಾಳಿಕೆಗೆ ಪ್ರತಿರೋಧ ವ್ಯಕ್ತಪಡಿಸುವ ಅಗತ್ಯವಿದೆ. ‘ಅಹಿಂದ’ ಜಾತಿಗಳಿಗೆ ಅಧಿಕಾರ ನೀಡದವರಿಗೆ ಸಂದೇಶ ರವಾನಿಸಬೇಕಿದೆ. ಸಮಾವೇಶ ಶೋಷಿತ ಸಮುದಾಯಗಳ ಶಕ್ತಿ ಪ್ರದರ್ಶನವಾಗಬೇಕು. ತಾಲ್ಲೂಕು ಮಟ್ಟದಲ್ಲಿ ಸಮಿತಿ ರಚಿಸಿ ಜನರನ್ನು ಕರೆತರಲಾಗುವುದು’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT