ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿತ್ರದುರ್ಗ: ಬಾಂಗ್ಲಾ ಹಿಂದೂಗಳ ರಕ್ಷಣೆಗೆ ಒತ್ತಾಯ

ಹಿಂದೂ ಹಿತರಕ್ಷಣಾ ವೇದಿಕೆ, ಬಿಜೆಪಿ ಮುಖಂಡರ ಪ್ರತಿಭಟನೆ, ಮಾನವ ಸರಪಳಿ
Published : 12 ಆಗಸ್ಟ್ 2024, 15:48 IST
Last Updated : 12 ಆಗಸ್ಟ್ 2024, 15:48 IST
ಫಾಲೋ ಮಾಡಿ
Comments

ಚಿತ್ರದುರ್ಗ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಗಲಭೆಯಿಂದಾಗಿ ಅಲ್ಲಿಯ ಹಿಂದೂಗಳ ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ವಿಶ್ವಸಂಸ್ಥೆ ಮಧ್ಯಪ್ರವೇಶ ಮಾಡಿ ಹಿಂದೂಗಳಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿ ಹಿಂದೂ ಹಿತರಕ್ಷಣಾ ವೇದಿಕೆ, ಬಿಜೆಪಿ ಸದಸ್ಯರು ಸೋಮವಾರ ನಗರದ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ವೃತ್ತದಲ್ಲಿ ಮಾನವ ಸರಪಳಿ ರಚಿಸಿದ ಪ್ರತಿಭಟನಾಕಾರರು ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂಗಳಿಗೆ ರಕ್ಷಣೆ ನೀಡಬೇಕು, ವಿಶ್ವದಲ್ಲಿರುವ ಎಲ್ಲಾ ಹಿಂದೂಗಳು ಒಂದಾಗಬೇಕು ಎಂದು ಘೋಷಣೆ ಕೂಗಿದರು.

ಈಚೆಗೆ ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆದಿವೆ. ಹಿಂದೂಗಳ ಮನೆ, ಕಚೇರಿಗಳಿಗೆ ಬೆಂಕಿ ಹಚ್ಚಲಾಗಿದೆ. ಈಗಾಗಲೇ ಹಲವರು ಮೃತಪಟ್ಟಿದ್ದಾರೆ. ಅಲ್ಲಿ ನಡೆಯುತ್ತಿರುವ ರಾಜಕೀಯ ಗಲಭೆಗಳಿಂದಾಗಿ ಹಿಂದೂಗಳು ಬಲಿಯಾಗುತ್ತಿದ್ದಾರೆ. ಸಾವಿರಾರು ಹಿಂದೂಗಳು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಸಮುದಾಯದ ರಕ್ಷಣೆಗೆ ಕೇಂದ್ರ ಸರ್ಕಾರ ಹಕ್ಕೊತ್ತಾಯ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಬಾಂಗ್ಲಾದೇಶ, ಪಾಕಿಸ್ತಾನಗಳಲ್ಲಿ ಹಿಂದೂಗಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದೆ. ಹಿಂದೂಗಳ ಮೇಲೆ ದೌರ್ಜನ್ಯ, ಅತ್ಯಾಚಾರ, ಕ್ರೌರ್ಯ ಪ್ರದರ್ಶನ ಮಾಡಲಾಗುತ್ತಿದೆ. ಸ್ವಾತಂತ್ರ್ಯ ಪೂರ್ವಕ್ಕೆ ಹೋಲಿಸಿದರೆ ಹಿಂದೂಗಳ ಜನಸಂಖ್ಯೆ ತೀವ್ರಗತಿಯಲ್ಲಿ ಕುಸಿದಿದೆ. ಮಾನವ ಹತ್ಯೆ ವಿರುದ್ಧ ವಿಶ್ವಸಂಸ್ಥೆ ಧ್ವನಿ ಎತ್ತಬೇಕು. ಬಾಂಗ್ಲಾದೇಶದಲ್ಲಿ ಹಿಂದೂಗಳ ಮನೆಗಳಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಸದ ಗೋವಿಂದ ಕಾರಜೋಳ, ಬಿಜೆಪಿ ಮುಖಂಡ ಜಿ.ಎನ್‌.ತಿಪ್ಪಾರೆಡ್ಡಿ, ವಿಶ್ವ ಹಿಂದೂ ಪರಿಷತ್‌ ಪ್ರಾಂತ್ಯ ಸಂಯೋಜಕ ಪ್ರಭಂಜನ್‌, ಹಿಂದೂ ಹಿತರಕ್ಷಣಾ ವೇದಿಕೆ ಮುಖಂಡರಾದ ರುದ್ರೇಶ್‌, ಅಶೋಕ್‌, ಓಂಕಾರ್‌, ರಂಗಸ್ವಾಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT