ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುರುಘಾ ಶರಣರ ಬಂಧನಕ್ಕೆ ಆಗ್ರಹಿಸಿ ರಾಷ್ಟ್ರೀಯ ಪ್ರಬುದ್ಧ ಸೇನೆ ಪ್ರತಿಭಟನೆ

Last Updated 1 ಸೆಪ್ಟೆಂಬರ್ 2022, 7:32 IST
ಅಕ್ಷರ ಗಾತ್ರ

ಚಿತ್ರದುರ್ಗ: ಬಾಲಕಿಯರ ಮೇಲಿನಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಕೂಡಲೇ ಬಂಧಿಸುವಂತೆ ಆಗ್ರಹಿಸಿ ರಾಷ್ಟ್ರೀಯ ಪ್ರಬುದ್ಧ ಸೇನೆ ಗುರುವಾರ ಪ್ರತಿಭಟನೆ ನಡೆಸಿತು.

ನಗರದ ಒನಕೆ ಓಬವ್ವ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಕಾರರು ಮುರುಘಾ ಶರಣರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿ ಐದು ದಿನ ಕಳೆದರು ಸಹ ಆರೋಪಿಗಳನ್ನು ಬಂಧಿಸಿಲ್ಲ. ಪೊಲೀಸ್ ಇಲಾಖೆ ಆರೋಪಿಗಳ ಪರ ನಿಂತಿದ್ದಾರೆ ಎಂಬ ಅನುಮಾನಗಳು ಮೂಡುತ್ತಿವೆ. ಸಂವಿಧಾನ ಹಾಗೂ ಕಾನೂನಿನಲ್ಲಿ ಸರ್ವರು ಸಮಾನರು ಎನ್ನುವ ನಂಬಿಕೆಯನ್ನು ಮುರುಘಾ ಶ್ರೀ ಪ್ರಕರಣದಲ್ಲಿ ಆಡಳಿತ ವ್ಯವಸ್ಥೆ ಹುಸಿಗೊಳಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಧ್ಯಕ್ಷ ಸಿ.ಎಲ್.ಅವಿನಾಶ್, ರಾಜ್ಯ ಸಂಚಾಲಕ ಮಂಜಪ್ಪ ನೀತಿಗೆರೆ ಇತರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT