ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: ಕೋಡಿಹಳ್ಳಿ ಬಂಧನಕ್ಕೆ ಆಗ್ರಹ

ರಾಜ್ಯ ರೈತ ಸಂಘದ ಜಿಲ್ಲಾ ಘಟಕ ಪ್ರತಿಭಟನೆ
Last Updated 31 ಮೇ 2022, 3:44 IST
ಅಕ್ಷರ ಗಾತ್ರ

ಚಿತ್ರದುರ್ಗ: ರೈತರ ಸ್ವಾಭಿಮಾನದ ಸಂಕೇತವಾದ ಹಸಿರು ಶಾಲು ಧರಿಸಿ ಭ್ರಷ್ಟಾಚಾರ ನಡೆಸಿರುವ ಕೋಡಿಹಳ್ಳಿ ಚಂದ್ರಶೇಖರ್‌ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕ ಸೋಮವಾರ ಪ್ರತಿಭಟನೆ ನಡೆಸಿತು.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಮಾಯಿಸಿದ ಪ್ರತಿಭಟನಕಾರರು, ಕೆಎಸ್‌ಆರ್‌ಟಿಸಿ ನೌಕರರ ಪ್ರತಿಭಟನೆ ವಿಚಾರದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಿದ್ದಾರೆ. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.

ಮಹನೀಯರು ಕಟ್ಟಿ ಬೆಳೆಸಿದ ರೈತ ಸಂಘವನ್ನು ಕೋಡಿಹಳ್ಳಿ ಚಂದ್ರಶೇಖರ್ ದುರುಪಯೋಗ ಮಾಡಿಕೊಳ್ಳುವುದನ್ನು ಸಂಘಟನೆ ಸಹಿಸುವುದಿಲ್ಲ ಎಂದು ಎಚ್ಚರಿಸಿದರು. ಬಳಿಕಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ನುಲೇನೂರು ಎಂ.ಶಂಕರಪ್ಪ, ರಾಜ್ಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ, ಜಿಲ್ಲಾ ಘಟಕದ ಅಧ್ಯಕ್ಷ ಬಸ್ತಿಹಳ್ಳಿ ಜಿ. ಸುರೇಶ್‌ ಬಾಬು, ಕಾರ್ಯಾಧ್ಯಕ್ಷ ಕೆ.ಸಿ. ಹೊರಕೇರಪ್ಪ, ಉಪಾಧ್ಯಕ್ಷರಾದ ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಮಲ್ಲಾಪುರ ತಿಪ್ಪೇಸ್ವಾಮಿ, ತಾಲ್ಲೂಕು ಘಟಕದ ಅಧ್ಯಕ್ಷ ಹಂಪಯ್ಯನಮಾಳಿಗೆ ಧನಂಜಯ, ಸಿ.ನಾಗರಾಜ, ಬ್ಯಾಡರಹಳ್ಳಿ ಶಿವಕುಮಾರ್, ಎಚ್.ಗೌಸ್‌ಪೀರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT