ಬುಧವಾರ, ಜೂನ್ 29, 2022
25 °C
ಎಸ್ಸಿ-ಎಸ್ಟಿ ಸಮುದಾಯದ ಮುಖಂಡರ ಪ್ರತಿಭಟನೆ

ಮೀಸಲಾತಿ ಹೆಚ್ಚಳಕ್ಕೆ ಆಗ್ರಹ: ಪ್ರತಿಭಟನಾ ಮೆರವಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಳ್ಳಕೆರೆ: ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ನಗರದಲ್ಲಿ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಬೆಳಿಗ್ಗೆ 11ರವರೆಗೆ ಅಂಗಡಿ, ಹೋಟೆಲ್‌ಗಳನ್ನು ಮುಚ್ಚಲಾಗಿತ್ತು. ಕೆಲ ಖಾಸಗಿ ಶಾಲೆಗಳು ರಜೆ ಘೋಷಿಸಿದ್ದವು.

ಶಾಸಕ ಟಿ. ರಘುಮೂರ್ತಿ ನೇತೃತ್ವದಲ್ಲಿ ಎಸ್ಸಿ-ಎಸ್ಟಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು.

ಶಾಸಕ ಟಿ. ರಘುಮೂರ್ತಿ ಮಾತನಾಡಿ, ‘ಕೇಂದ್ರ ಮತ್ತು ರಾಜ್ಯ ಸರ್ಕಾರ ಎಸ್ಸಿ-ಎಸ್ಟಿ ಸಮುದಾಯವನ್ನು ಸಂಪೂರ್ಣವಾಗಿ ಕಡೆಗಣಿಸಿವೆ. ಜನ ಸಂಖ್ಯೆಗನುಗುಣವಾಗಿ ಸಂವಿಧಾನಬದ್ಧ ಮೀಸಲಾತಿ ನೀಡದಿದ್ದರೆ ಮುಂದಿನ ದಿನಗಳಲ್ಲಿ ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಸಾರಿಗೆ ಸಚಿವರ ನೇತೃತ್ವದಲ್ಲಿ ಸಮಿತಿ ರಚಿಸಿ ಅತಿ ಶೀಘ್ರವಾಗಿ ಶೇ 7.5 ರಷ್ಟು ಮೀಸಲಾತಿ ಹೆಚ್ಚಳ ಮಾಡುವುದರ ಮೂಲಕ ಶೋಷಿತ ಸಮುದಾಯಗಳ ಹಿತವನ್ನು ಕಾಪಾಡಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪ್ರಕಾಶ್‍ಮೂರ್ತಿ, ‘ರಾಜನಹಳ್ಳಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರು, ಸಮುದಾಯದ ಒಳತಿಗೆ ಹೋರಾಟ ನಡೆಸುತ್ತಿದ್ದಾರೆ. ಆದರೆ ಸರ್ಕಾರ ಗಮನಹರಿಸದಿರುವುದು ಬೇಸರದ ಸಂಗತಿ’ ಎಂದರು.

ವಾಲ್ಮೀಕಿ ಟ್ರಸ್ಟ್ ಮುಖಂಡ ಹರ್ತೀಕೋಟೆ ವೀರೇಂದ್ರಸಿಂಹ, ‘ಸಾಮಾಜಿಕ ಕಾಳಜಿಯಿಂದ ನಡೆಸುತ್ತಿರುವ ಸ್ವಾಮೀಜಿಯ ಹೋರಾಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು’ ಎಂದು ಹೇಳಿದರು.

ಜೆಡಿಎಸ್ ಮುಖಂಡ ಎಂ. ರವೀಶ್‍ಕುಮಾರ್, ಕೆ.ಟಿ. ಕುಮಾರಸ್ವಾಮಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸಮರ್ಥರಾಯ್, ರೈತ ಮುಖಂಢ ಕೆ.ಪಿ. ಭೂತಯ್ಯ, ಸೌಭಾಗ್ಯಮ್ಮ ಮಾತನಾಡಿದರು.

ಬಾಬು ಜಗಜೀವನರಾಂ ವೃತ್ತದಿಂದ ಹೊರಟ ವಿವಿಧ ಸಂಘಟನೆಯ ಕಾರ್ಯಕರ್ತರು ಬಿ.ಎಂ. ಸರ್ಕಾರಿ ಪ್ರೌಢಶಾಲೆ ಆವರಣದವರೆಗೆ ಮೆರವಣಿಗೆ ನಡೆಸಿದರು.

ನಗರಸಭೆ ಅಧ್ಯಕ್ಷೆ ಸುಮಕ್ಕ ಅಂಜನಪ್ಪ, ಉಪಾಧ್ಯಕ್ಷೆ ಮಂಜುಳಾ ಆರ್. ಪ್ರಸನ್ನಕುಮಾರ್, ಸದಸ್ಯ ಕೆ. ವೀರಭದ್ರಯ್ಯ, ಕನ್ನಡ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷ ವೆಂಕಟೇಶ್, ದಳವಾಯಿ ಮೂರ್ತಿ, ದೊಡ್ಡೇರಿ ಮಲ್ಲಿಕಾರ್ಜುನ, ಪರಶುರಾಂಪುರ ಜಯಕುಮಾರ್, ವಿಜಯಕುಮಾರ್, ಭದ್ರಿ, ಗುಜ್ಜಾರಪ್ಪ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾಬಾಯಿ, ಲಕ್ಷ್ಮೀದೇವಿ, ಸೂರಯ್ಯ, ಮಾರುತೇಶ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು