ಟಿ.ವೆಂಕಟೇಶ್ ಅವರು ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಜನಸ್ನೇಹಿ ಹಾಗೂ ನಾಗರಿಕ ಸ್ನೇಹಿ ಸೇವೆಗಳನ್ನು ಒದಗಿಸಿದ್ದಾರೆ. ರಾಜ್ಯ ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ, ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ರೂಪಿಸಿದ್ದಾರೆ. ಈ ಎಲ್ಲಾ ಕೊಡುಗೆಗಳನ್ನು ಆಧರಿಸಿ, ಕಂದಾಯ ಇಲಾಖೆ ವತಿಯಿಂದ 2023-24ನೇ ಸಾಲಿಗೆ ‘ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.