ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಹಾಗೂ ಹಿಂದುಳಿದ ವರ್ಗಗಳ ನಾಯಕ ಡಿ.ದೇವರಾಜ ಅರಸು ತೋರಿದ ಮಾರ್ಗದಲ್ಲಿ ಹೆಜ್ಜೆ ಹಾಕುವ ಅಗತ್ಯವಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್ಬಾಬು ಅಭಿಪ್ರಾಯಪಟ್ಟರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಗುರುವಾರ ಏರ್ಪಡಿಸಿದ್ದ ದೇವರಾಜ ಅರಸು ಅವರ 105ನೇ ಜನ್ಮದಿನಾಚರಣೆಯಲ್ಲಿ ಅವರು ಮಾತನಾಡಿದರು.

‘ದೇವರಾಜ ಅರಸು ಅವರು ಶೋಷಿತರ ಬಗ್ಗೆ ಅಪಾರ ಕಾಳಜಿ ಇಟ್ಟುಕೊಂಡಿದ್ದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕಲ್ಪಿಸಿದ ಧೀಮಂತ ನಾಯಕರು. ಅವರು ಪ್ರತಿಯೊಬ್ಬರಿಗೂ ಆದರ್ಶವಾಗಬೇಕು’ ಎಂದರು.

‘ಅರಸು ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಾಜ್ಯ ಸಾಕಷ್ಟು ಅಭಿವೃದ್ಧಿ ಕಂಡಿದೆ. ಅಭಿವೃದ್ಧಿಯ ಹರಿಕಾರ ಎಂದೇ ಅವರನ್ನು ಗುರುತಿಸಲಾಗುತ್ತಿದೆ. ಮೈಸೂರು ರಾಜ್ಯವನ್ನು ಕರ್ನಾಟಕವೆಂದು ನಾಮಕರಣ ಮಾಡಿದ ಹೆಗ್ಗಳಿಕೆ ಅವರಿಗೆ ಸಲ್ಲುತ್ತದೆ. ರಾಜ್ಯದ ಪ್ರತಿಯೊಬ್ಬರಿಗೂ ಶಿಕ್ಷಣ ಸಿಗಬೇಕು ಎಂಬ ಕಾರಣಕ್ಕೆ ಹಲವು ಸೌಲಭ್ಯಗಳನ್ನು ಕಲ್ಪಿಸಿದರು’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಾಮಾಜಿಕ ನ್ಯಾಯ ಸ್ಥಾಯಿ ಅಧ್ಯಕ್ಷ ನರಸಿಂಹರಾಜು ಮಾತನಾಡಿ, ‘ಅರಸು ಅವರು ಉಳುವವನೇ ಭೂಮಿಯ ಒಡೆಯ ಎಂಬ ಕಾಯ್ದೆ ಜಾರಿಗೆ ತಂದರು. ಮಕ್ಕಳ ಶಿಕ್ಷಣದ ದೃಷ್ಟಿಯಿಂದ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗಿದ್ದಾರೆ’ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅವಿನ್, ಜಿಲ್ಲಾ ಪಂಚಾಯಿತಿ ಸಿಪಿಒ ಗಾಯತ್ರಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.