ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಿಡ, ಮರ ಬೆಳೆಸಿ, ಪರಿಸರ ಸಂರಕ್ಷಿಸಿ: ಕೃಷಿ ಅಧಿಕಾರಿ ಸತೀಶ್ ನಾಯಕ್

Published 28 ಜೂನ್ 2023, 13:58 IST
Last Updated 28 ಜೂನ್ 2023, 13:58 IST
ಅಕ್ಷರ ಗಾತ್ರ

ಧರ್ಮಪುರ: ಪರಿಸರವು ಕಲುಷಿತಗೊಂಡಿದ್ದು, ಹೆಚ್ಚು ಹೆಚ್ಚು ಗಿಡ ಮರಗಳನ್ನು ಬೆಳಸುವುದರ ಮೂಲಕ ಪರಿಸರವನ್ನು ಸಂರಕ್ಷಿಸಬೇಕಾದ ಹೊಣೆಗಾರಿಕೆ ಪ್ರತಿಯೊಬ್ಬರಲ್ಲಿಯೂ ಬರಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಕೃಷಿ ಅಧಿಕಾರಿ ಸತೀಶ್ ನಾಯಕ್ ಹೇಳಿದರು. 

ಸಮೀಪದ ಹೊಸಕೆರೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಗಿಡ ನೆಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜನರ ದುರಾಸೆ ಮತ್ತು ನಗರೀಕರಣದಿಂದಾಗಿ ಗಿಡ ಮರಗಳನ್ನು ಬೆಳಸುವುದರ ಬದಲಾಗಿ ಕಡಿದು ಪರಿಸರವನ್ನು ಹಾಳು ಮಾಡುತ್ತಿದ್ದಾರೆ. ಅದಕ್ಕಾಗಿ ವಿದ್ಯಾರ್ಥಿಗಳು ತಮ್ಮ ತಮ್ಮ ಶಾಲೆಯ ಆವರಣ ಮತ್ತು ಗ್ರಾಮಗಳಲ್ಲಿ ಗಿಡ ಮರಗಳನ್ನು ಬೆಳಸಬೇಕು ಎಂದರು.

ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯಶಿಕ್ಷಕ ಪ್ರಕಾಶ್, ಗ್ರಾಮ ಪಂಚಾಯಿತಿ ಸದಸ್ಯ ಮಲ್ಲಿಕಾರ್ಜುನ, ದೇವರಾಜ್ ಮೇಲ್ವಿಚಾರಕ ಎಸ್.ಎಂ. ಪ್ರಕಾಶ್ ,ಅನಿಲ್ ,ಅನುಷಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT