ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಸಬಲೀಕರಣದ ಪ್ರಯತ್ನ ಅನುಕರಣೀಯ: ಶಾಸಕ ಜಿ.ಎಚ್.ತಿಪ್ಪಾರೆಡ್ಡಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಕಾರ್ಯಕ್ಕೆ ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ಮೆಚ್ಚುಗೆ
Last Updated 5 ಜನವರಿ 2022, 11:24 IST
ಅಕ್ಷರ ಗಾತ್ರ

ಚಿತ್ರದುರ್ಗ:ಚುನಾಯಿತ ಜನಪ್ರತಿನಿಧಿಗಳು ಮಾಡುವಷ್ಟು ಕೆಲಸವನ್ನು ಡಿ.ವೀರೇಂದ್ರ ಹೆಗ್ಗಡೆ ಅವರು ತಮ್ಮ ಸಂಸ್ಥೆಗಳ ಮೂಲಕ ಮಾಡುತ್ತಿದ್ದಾರೆ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಶ್ಲಾಘಿಸಿದರು.

ಇಲ್ಲಿನ ಹೊಳಲ್ಕೆರೆ ರಸ್ತೆಯಲ್ಲಿರುವ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಲ್ಲಿ ಬುಧವಾರ ಡಿಜಿಟಲ್ ಸೇವಾ ಕಾಮನ್ ಸರ್ವೀಸ್ ಸೆಂಟರ್ ಉದ್ಘಾಟಿಸಿ ಮಾತನಾಡಿದರು.

‘ಈಗಾಗಲೇ ಸಾಕಷ್ಟು ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಅವರಿಗೆ ಸಂಸ್ಥೆಯ ಮೂಲಕ ಡಿಜಿಟಲ್ ಸೇವಾ ಕೇಂದ್ರ ತೆರೆಯಲು ಸರ್ಕಾರವೇ ಮನವಿ ಮಾಡಿದೆ. ಇದು ಅವರ ಪಾರದರ್ಶಕ ಸೇವೆಗೆ ಹಿಡಿದ ಕನ್ನಡಿಯಾಗಿದೆ’ ಎಂದು ತಿಳಿಸಿದರು.

‘ಮಹಿಳಾ ಸಬಲೀಕರಣಕ್ಕೆ ಧರ್ಮಸ್ಥಳ ಸಂಸ್ಥೆ ನೀಡಿದಷ್ಟು ಕೊಡುಗೆ ಬೇರೆ ಯಾವುದೇ ಸಂಘ ಸಂಸ್ಥೆ ನೀಡಿಲ್ಲ. ಸರ್ಕಾರ ಮಾಡುವ ಕೆಲಸವನ್ನು ಈ ಸಂಸ್ಥೆ ಮಾಡುತ್ತಿದೆ’ ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ವಿದ್ಯಾರ್ಥಿ ವೇತನ ಹಾಗೂ ಮಹಿಳೆಯರಿಗೆ ಇ-ಶ್ರಮ ಕಾರ್ಡ್‍ಗಳನ್ನು ವಿತರಿಸಲಾಯಿತು.

ವಿಧಾನ ಪರಿಷತ್ ನೂತನ ಸದಸ್ಯ ಕೆ.ಎಸ್.ನವೀನ್, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ, ಯೋಜನ ನಿರ್ದೇಶಕರಾದ ಯಶೋಧ ಶೆಟ್ಟಿ, ಪ್ರವೀಣ್, ಜನಜಾಗೃತಿ ವೇದಿಕೆ ಸದಸ್ಯರಾದ ನಾಗರಾಜ ಸಂಗಂ, ರೂಪಾ ಜನಾರ್ದನ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT