ಚಿತ್ರದುರ್ಗ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನೂರಾರು ಕೊಲೆಗಳ ರಹಸ್ಯ ಭೇದಿಸುವಂತೆ ಒತ್ತಾಯಿಸಿ ಧರಣಿ ಸಂಸ್ಥೆ ಸೇರಿ ವಿವಿಧ ಸಂಘಟನೆಗಳ ಸದಸ್ಯರು, ಕಾಲೇಜು ವಿದ್ಯಾರ್ಥಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಪ್ರವಾಸಿ ಮಂದಿರದ ಆವರಣದಲ್ಲಿ ಸೇರಿದ ಪ್ರತಿಭಟನಕಾರರು ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಿದರು. ಅಮಾಯಕ ಮಹಿಳೆಯರ ಸಾವಿಗೆ ನ್ಯಾಯ ನೀಡಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು, ಸತ್ಯ ಹೊರಬರಬೇಕು ಎಂದು ಘೋಷಣೆ ಕೂಗಿದರು. ಅಮಾಯಕ ಮಹಿಳೆಯರನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

‘ಕಾಲೇಜಿಗೆ ತೆರಳಿದ್ದ ಸೌಜನ್ಯ ಮನೆಗೆ ವಾಪಸ್ ಬರಲಿಲ್ಲ. ಪ್ರಕರಣದಲ್ಲಿ ಬಂಧಿಸಲಾಗಿದ್ದ ಸಂತೋಷ್ ರಾವ್ನನ್ನು ನಿರಪರಾಧಿ ಎಂದು ನ್ಯಾಯಾಲಯ ಘೋಷಿಸಿದೆ. ಹೀಗಾಗಿ ನಿಜವಾದ ಅಪರಾಧಿಗಳು ಯಾರು ಎಂಬುದನ್ನು ಪತ್ತೆ ಮಾಡಬೇಕು. ಸೌಜನ್ಯ ಅತ್ಯಚಾರ, ಕೊಲೆ ಪ್ರಕರಣದ ನಂತರ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಜನರು ಒತ್ತಾಯ ಮಾಡುತ್ತಿದ್ದರೂ ಸರ್ಕಾರ ಇಲ್ಲಿಯವರೆಗೂ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ’ ಎಂದು ದೂರಿದರು.

‘ಜನರ ಆಕ್ರೋಶ ದೊಡ್ಡಮಟ್ಟದಲ್ಲಿ ವ್ಯಕ್ತವಾದ ನಂತರ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿದೆ. ಈಗಲಾದರೂ ಸರ್ಕಾರ ತನಿಖೆಗೆ ಮುಂದಾಗಿರುವುದು ಸ್ವಾಗತಾರ್ಹ. ತನಿಖಾ ತಂಡದಲ್ಲಿ ದಕ್ಷ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ತಂಡವು ಧರ್ಮಸ್ಥಳದಲ್ಲಿ ನಡೆದಿರುವ ಎಲ್ಲ ಪ್ರಕರಣಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಆ ಮೂಲಕ ಜೀವ ಕಳೆದುಕೊಂಡಿರುವ ಅಮಾಯಕರಿಗೆ ನ್ಯಾಯ ಒದಗಿಸಬೇಕು’ ಎಂದು ಒತ್ತಾಯಿಸಿದರು.

‘ಶಾಲಾ ಶಿಕ್ಷಕಿ ವೇದವಲ್ಲಿ ಕೊಲೆ ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಪೊಲೀಸಲು ಸೋತಿದ್ದಾರೆ. ಧರ್ಮಸ್ಥಳ ದೇವಾಲಯದಲ್ಲಿ ಮಾವುತನಾಗಿ ಕೆಲಸ ಮಾಡುತ್ತಿದ್ದ ಕಾರ್ಮಿಕ ದಂಪತಿಯನ್ನು ಅಮಾನುಷವಾಗಿ ಕೊಲೆ ಮಾಡಲಾಗಿದೆ. ಇಂತಹ ನೂರಾರು ಕೊಲೆಗಳು ಅಲ್ಲಿ ನಡೆದಿದ್ದರೂ ಸ್ಥಳೀಯ ಪೊಲೀಸರು ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ. ಈಗಲಾದರೂ ಈ ಎಲ್ಲ ಕೊಲೆಗಳ ಕೊಲೆಗಾರರನ್ನು ಪತ್ತೆ ಹಚ್ಚಬೇಕು’ ಎಂದು ಆಗ್ರಹಿಸಿದರು.

‘ದೇವರು, ಧರ್ಮ ಎಂದು ಜನರು ಬಲವಾಗಿ ನಂಬಿರುವ ಧರ್ಮಸ್ಥಳದಲ್ಲಿ ರಹಸ್ಯ ಕೊಲೆಗಳು ನಡೆದಿರುವುದು ದುರದೃಷ್ಟಕರ. ಧರ್ಮದ ಹೆಸರಿನಲ್ಲಿ ಅನ್ಯಾಯ ಮಾಡಿರುವವರನ್ನು ಸಮಗ್ರ ತನಿಖೆಗೆ ಒಳಪಡಿಸಬೇಕು. ಹಣ ಬಲ, ತೋಳ್ಬಲ, ರಾಜಕೀಯ ಬಲದಿಂದ ಕಾನೂನು ಕುಣಿಕೆಯಿಂದ ತಪ್ಪಿಸಿಕೊಂಡಿರುವವರನ್ನು ಮಟ್ಟ ಹಾಕಬೇಕು. ಎಲ್ಲರಿಗೂ ಕಾನೂನು ಒಂದೇ ಎನ್ನುವ ಸತ್ಯವನ್ನು ಅನಾವರಣಗೊಳಿಸಬೇಕು’ ಎಂದು ಧರಣಿ ಸಂಸ್ಥೆಯ ಮುಖ್ಯಸ್ಥೆ ರಮಾ ನಾಗರಾಜ್ ಒತ್ತಾಯಿಸಿದರು.

‘ಧರ್ಮದ ಹೆಸರಿನಲ್ಲಿ ಆಡಳಿತ ನಡೆಸುತ್ತಿರುವ ಕುಟುಂಬಗಳ ಮೇಲೆ ಸಾಕಷ್ಟು ಅನುಮಾನಗಳು ಮೂಡಿವೆ. ರಾಜಕೀಯವಾಗಿ ಅವರು ಉನ್ನತ ಸ್ಥಾನ ಹೊಂದಿದ್ದಾರೆ. ಇದೇ ಕಾರಣದಿಂದಾಗಿ ಆರೋಪಗಳನ್ನು ಮುಚ್ಚಿ ಹಾಕುತ್ತಿದ್ದಾರೆ. ಪೊಲೀಸ್ ತನಿಖೆ ಆರಂಭವಾದ ನಂತರ ಅವರು ತಮ್ಮ ಸ್ಥಾನ ತ್ಯಜಿಸಬೇಕು. ಅವರು ಅಮಾಯಕರು ಎಂದು ರುಜುವಾತಾದರೆ ಮತ್ತೆ ಅವರು ಸ್ಥಾನ ಪಡೆಯಬಹುದು. ಹೀಗಾಗಿ ಅವರು ತಮ್ಮ ಎಲ್ಲ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಬೇಕು’ ಎಂದು ಒತ್ತಾಯಿಸಿದರು.

‘ರಾಜಕೀಯ ಪ್ರಭಾವ ಬಳಸಿ ಕೊಲೆಗಳನ್ನು ಮುಚ್ಚಿಹಾಕಲಾಗಿದೆ ಎಂದು ಆರೋಪಿಸಲಾಗಿದೆ. ತಮ್ಮ ಪ್ರಭಾವದಿಂದಲೇ ಕೊಲೆಗಾರರನ್ನು ರಕ್ಷಣೆ ಮಾಡಿದ್ದಾರೆ ಎನ್ನುವುದಕ್ಕೆ ಸಾಕಷ್ಟು ಸಾಕ್ಷ್ಯಗಳಿವೆ. ನಮ್ಮ ಹೋರಾಟ ಯಾರ ವಿರುದ್ಧವೂ ವೈಯಕ್ತಿಕವಾದ ಹೋರಾಟವಲ್ಲ. ನ್ಯಾಯಕ್ಕಾಗಿ ನಾವು ಹೋರಾಟ ನಡೆಸುತ್ತಿದ್ದೇವೆ. ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯದೇ ನ್ಯಾಯಸಮ್ಮತವಾಗಿ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ವಕೀಲರಾದ ಶ್ರುತಿ, ವಿವಿಧ ಸಂಘಟನೆಗಳ ತಿಪ್ಪೇಸ್ವಾಮಿ, ವೀರಣ್ಣ, ಶಶಿಧರ್, ವೀರೇಶ್, ಮಧುಸೂದನ್, ಮಧು ಶ್ರೀನಿವಾಸ್ ಇದ್ದರು.

ಸತ್ತವರಿಗೆ ಸಂಸ್ಕಾರ ಮಾಡಲಿ

ಸಾಹಿತಿ ಉಜ್ಜಿನಪ್ಪ ಮಾತನಾಡಿ ‘ಭಾರತೀಯ ಸಂಸ್ಕೃತಿಯಲ್ಲಿ ಮೃತಪಟ್ಟ ಆತ್ಮಗಳಿಗೆ ಸಂಸ್ಕಾರ ಮಾಡುವುದು ಸಂಪ್ರದಾಯವಾಗಿದೆ. ಆದರೆ ಧರ್ಮಸ್ಥಳಗಳಲ್ಲಿ ರಹಸ್ಯವಾಗಿ ಕೊಲೆಯಾಗಿರುವ ಜೀವಗಳಿಗೆ ಇಲ್ಲಿಯವರೆಗೂ ಅಂತ್ಯಸಂಸ್ಕಾರ ಮಾಡಲು ಸಾಧ್ಯವಾಗಿಲ್ಲ. ಈಗಲಾದರೂ ಅನ್ಯಾಯವಾಗಿ ಕೊಲೆಗೀಡಾದವರಿಗೆ ಸಂಸ್ಕಾರ ನೆರವೇರಿಸಬೇಕು’ ಎಂದು ಒತ್ತಾಯಿಸಿದರು. ‘ವಿಶೇಷ ತನಿಖಾ ತಂಡದಲ್ಲಿ ಕೆಲವು ಪೊಲೀಸ್ ಅಧಿಕಾರಿಗಳು ಹಿಂದೆ ಸರಿಯುತ್ತಿರುವುದು ಸರಿಯಲ್ಲ. ಉನ್ನತ ಅಧಿಕಾರಿಗಳು ಆತಂಕ ವ್ಯಕ್ತಪಡಿಸುತ್ತಿರುವುದು ಸರಿಯಾದ ಬೆಳವಣಿಗೆಯಲ್ಲ. ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಯುವಂತೆ ನಿಗಾ ವಹಿಸಬೇಕು’ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.