ಭಾನುವಾರ, ಏಪ್ರಿಲ್ 11, 2021
31 °C
ನಾಯಕನಹಟ್ಟಿ ಹೋಬಳಿಯ ರೇಖಲಗೆರೆ ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳು

ರೇಖಲಗೆರೆ: ಗ್ರಾಮದಲ್ಲೇ ಜ್ವರ ಕೇಂದ್ರ ತೆರೆದು ಚಿಕಿತ್ಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರೇಖಲಗೆರೆ (ನಾಯಕನಹಟ್ಟಿ): ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿ ಹೋಬಳಿ ಸಮೀಪದ ರೇಖಲಗೆರೆ ಗ್ರಾಮದಲ್ಲಿ ಸ್ವಚ್ಛತೆ ಕೊರತೆಯ ಕಾರಣಕ್ಕೆ ಜ್ವರದಿಂದ ಬಳಲುತ್ತಿದ್ದವರಿಗಾಗಿ ಗ್ರಾಮದಲ್ಲೇ ಜ್ವರ ಚಿಕಿತ್ಸಾ ಕೇಂದ್ರ ತೆರೆದು ಚಿಕಿತ್ಸೆ ನೀಡಲಾಗುತ್ತಿದೆ.

‘ಐದು ದಿನಗಳವರೆಗೂ ಕೇಂದ್ರದಲ್ಲಿ ಪ್ರತಿಯೊಬ್ಬರನ್ನೂ ತಪಾಸಣೆಗೊಳಪಡಿಸಿ ಸೂಕ್ತ ಚಿಕಿತ್ಸೆ ನೀಡಲಾಗುವುದು’ ಎಂದು ಮುಸ್ಟಲಗುಮ್ಮಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಡಾ.ಬಿ. ಜಬೀವುಲ್ಲಾ ಹೇಳಿದರು.

ಆರೋಗ್ಯ ಇಲಾಖೆಯ ಸಿಬ್ಬಂದಿ ಜತೆ ರೇಖಲಗೆರೆ ಗಾಮಕ್ಕೆ ಸೋಮವಾರ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿ ಅವರು ಮಾತನಾಡಿದರು. ಗ್ರಾಮದಲ್ಲಿ ಸ್ವಚ್ಛತೆ ಕೊರತೆಯ ಕಾರಣ ಜ್ವರಪೀಡಿತರ ಸಂಖ್ಯೆ ಹೆಚ್ಚಾಗಿದೆ. ಸಮಸ್ಯೆ ಇರುವವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರು.

ಗ್ರಾಮದಲ್ಲಿರುವ ಚರಂಡಿಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬ್ಲೀಚಿಂಗ್ ಪೌಡರ್ ಸಿಂಪಡಣೆ, ತ್ಯಾಜ್ಯ ವಿಲೇವಾರಿ, ಕೊಳಚೆನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳಲು ಮಲ್ಲೂರಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಲಾಗಿದೆ. ಪ್ರತಿ ಮನೆಯ ನೀರಿನ ತೊಟ್ಟಿಗಳಲ್ಲಿ ಲಾರ್ವಾ ಸಮೀಕ್ಷೆ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

‘ರೇಖಲಗೆರೆ ಗ್ರಾಮದಲ್ಲಿ ಸ್ವಚ್ಛತೆ ಕೊರತೆಯಿಂದ ಸೊಳ್ಳೆಗಳ ಹಾವಳಿ; 15 ಜನರಿಗೆ ಡೆಂಗಿ, ಟೈಫಾಯಿಡ್‌’ ಶೀರ್ಷಿಕೆ ಅಡಿ ‘ಪ್ರಜಾವಾಣಿ’ಯಲ್ಲಿ ಸೋಮವಾರ ವರದಿ ಪ್ರಕಟಗೊಂಡಿತ್ತು. ಎಚ್ಚೆತ್ತ ಆರೋಗ್ಯ ಇಲಾಖೆ ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಪರಿಹಾರಕ್ಕೆ ಕ್ರಮಕೈಗೊಂಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು