ಚಿತ್ರದುರ್ಗ: ಡಿ.ಕೆ.ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ 13 ಮಂದಿ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ ಮೊದಲ ಹಂತದಲ್ಲಿ ಜಿಲ್ಲೆಯಿಂದ ಯಾವೊಬ್ಬರೂ ಸಚಿವರಾಗಿಲ್ಲ. ಹೀಗಾಗಿ ಸಚಿವ ಸ್ಥಾನಕ್ಕಾಗಿ ನಡೆಸುತ್ತಿರುವ ಪ್ರಯತ್ನಗಳು ಮುಂದುವರಿದಿವೆ.

ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಮೊಳಕಾಲ್ಮುರು ಕ್ಷೇತ್ರದ ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಸದುರ್ಗ ಕೇತ್ರದ ಬಿ.ಜಿ.ಗೋವಿಂದಪ್ಪ ಅವರಲ್ಲಿ ಯಾರಾದರೂ ಒಬ್ಬರು ಮುಖ್ಯಮಂತ್ರಿಗಳ ಜೊತೆ ಪ್ರಮಾಣ ವಚನ ಸ್ವೀಕಾರ ಮಾಡುವರೇ ಎಂಬ ಬಗ್ಗೆ ಜಿಲ್ಲೆಯಲ್ಲಿ ಕುತೂಹಲವಿತ್ತು. ಆದರೆಮೊದಲ ಹಂತದಲ್ಲಿ ಕೋಟೆನಾಡಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ. ಮುಂದಿನ ಹಂತದಲ್ಲಿ ಯಾರಿಗೆ ಸಚಿವರಾಗುವ ಅವಕಾಶ ದೊರೆಯಲಿದೆ ಎಂಬ ಪ್ರಶ್ನೆ ಜೀವಂತವಾಗಿ ಉಳಿದಿದೆ.

ಜಿಲ್ಲೆಯಿಂದ ಒಬ್ಬರಿಗೆ ಸಚಿವರಾಗುವ ಅವಕಾಶ ಸಿಗುವುದು ನಿಶ್ಚಿತ. ರಘುಮೂರ್ತಿ ಅವರೇ ಸಚಿವರಾಗುವ ಅವಕಾಶ ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ. ಯಾರಿಗೆ ಅವಕಾಶ ಸಿಕ್ಕಿದರೂ ಎಲ್ಲರೂ ಒಗ್ಗಟ್ಟಿನಿಂದ ಮುನ್ನಡೆಯುವುದಾಗಿ ಗೋಪಾಲಕೃಷ್ಣ ಹಾಗೂ ಗೋವಿಂದಪ್ಪ ತಿಳಿಸಿದ್ದಾರೆ. ಹೀಗಾಗಿ ಡಿ.ಕೆ.ಶಿವಕುಮಾರ್ ಅವರ ಸರ್ಕಾರದಲ್ಲಿ ಕೋಟೆ ಜಿಲ್ಲೆಯಿಂದ ಯಾರು ಸಚಿವರಾಗುತ್ತಾರೆ ಎಂಬ ಕುತೂಹಲ ಮುಂದುವರಿದಿದೆ.

ಈಗ ಹೊಸದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿರುವ ಸಚಿವರಲ್ಲಿ ಹಿರಿಯ ಮತ್ತು ಕಿರಿಯರ ಸಂಗಮವಿದೆ. ಮುಂದಿನ ಹಂತದಲ್ಲೂ ಅದೇ ರೀತಿ ಸೂತ್ರ ಬಳಸಿದರೆ ಕೆ.ಸಿ.ವೀರೇಂದ್ರ ಅವರಿಗೂ ಅವಕಾಶ ದೊರೆಯುತ್ತದೆ ಎಂಬ ಮಾತುಗಳೂ ಕ್ಷೇತ್ರದಲ್ಲಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-44-508573595

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.