ಹಿರಿಯೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಡಿ.ಸುಧಾಕರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಭಾವುಕರಾದರು. ತಮ್ಮ ಆಪ್ತ ಗೆಳೆಯನನ್ನು ನೆನೆದು ಕಣ್ಣೀರಾದರು.

‘ನಾನು ಮತ್ತು ಸುಧಾಕರ್ ಆಪ್ತ ಸ್ನೇಹಿತರು. ಇಷ್ಟು ಚಿಕ್ಕ ವಯಸ್ಸಿನಲ್ಲೇ ಅವರು ನಮ್ಮನ್ನು ಅಗಲುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ. ಆಸ್ಪತ್ರೆಗೆ ದಾಖಲಾಗುವ ಮುನ್ನ ಅವರು ಅತ್ಯಂತ ಆತ್ಮವಿಶ್ವಾಸದಿಂದ ಇದ್ದರು. ಕಾಲಿನ ಸಮಸ್ಯೆ ಸರಿಪಡಿಸಿಕೊಂಡು ಬರುತ್ತೇನೆ ಎಂದು ಹೇಳಿಯೇ ಆಸ್ಪತ್ರೆಗೆ ಹೋಗಿದ್ದರು. ಆದರೆ ಕೊನೆಯ ಹಂತದಲ್ಲಿ ಶ್ವಾಸಕೋಶದ ಸೋಂಕಿಗೆ ಒಳಗಾದ ಕಾರಣ ಅದರಿಂದ ಗುಣಮುಖರಾಗದೆ ಇಹಲೋಕ ತ್ಯಜಿಸಿದ್ದಾರೆ’ ಎಂದರು.

‘ಸುಧಾಕರ್ ಅವರು ಚಿತ್ರದುರ್ಗ ಜಿಲ್ಲೆಯ ಅಭಿವೃದ್ಧಿಗಾಗಿ, ಅದರಲ್ಲೂ ವಿಶೇಷವಾಗಿ ರೈತರ ಬದುಕಿನಲ್ಲಿ ಬದಲಾವಣೆ ತರಲು ನಿರಂತರವಾಗಿ ಶ್ರಮಿಸಿದವರು. ಈ ಭಾಗದ ರೈತರ ಹಿತದೃಷ್ಟಿಯಿಂದ ಭದ್ರಾ ಮೇಲ್ದಂಡೆ ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೆ ತರಲು ಶ್ರಮಿಸಿದ್ದರು. ಪರೀಕ್ಷಾರ್ಥ ನೀರು ಹರಿವಿನ ವೇಳೆ ನೀರು ಬಿಡಿಸುವಲ್ಲಿ ಅವರ ಪಾತ್ರ ದೊಡ್ಡದಿದೆ. ವೈ ಜಂಕ್ಷನ್ ಬಳಿಯ ದೀರ್ಘಕಾಲದ ಸಮಸ್ಯೆ ಬಗೆಹರಿಸಲು ಶಾಸಕರನ್ನು ಒಟ್ಟುಗೂಡಿಸಿ ಹೋರಾಟ ಮಾಡಿದ್ದರು’ ಎಂದು ಹೇಳಿದರು.

‘ಜಾತಿ–ಧರ್ಮದ ಭೇದವಿಲ್ಲದೆ ಸಾಮಾಜಿಕ ನ್ಯಾಯಕ್ಕಾಗಿ ಕೆಲಸ ಮಾಡಿದ ಸುಧಾಕರ್ ಅವರ ಸಾವು ಪಕ್ಷ ಹಾಗೂ ಸರ್ಕಾರಕ್ಕೆ ತುಂಬಲಾರದ ನಷ್ಟವಾಗಿದೆ. ಸುಧಾಕರ್ ಅವರ ಕುಟುಂಬಕ್ಕೆ ಸರ್ಕಾರ ಹಾಗೂ ಪಕ್ಷ ಸಂಪೂರ್ಣ ಬೆಂಬಲವಾಗಿ ನಿಲ್ಲಲಿದೆ’ ಎಂದರು.

ಇದೇ ವೇಳೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಡಿ.ಕೆ. ಶಿವಕುಮಾರ್ ಮೊಬೈಲ್ಗೆ ಕರೆ ಮಾಡಿ ಸಚಿವ ಡಿ.ಸುಧಾಕರ್ ಅವರ ಪುತ್ರ ಸುಹಾಸ್ ಅವರಿಗೆ ಸಾಂತ್ವನ ಹೇಳಿದರು.

‘ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರ ಅಕಾಲಿಕ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ನಿಧನದ ಸುದ್ದಿಯನ್ನು ನಂಬಲು ಅಸಾಧ್ಯವಾಗುತ್ತಿದೆ. ಸುಧಾಕರ್ ಅವರು ಒಬ್ಬ ಸಜ್ಜನ ರಾಜಕಾರಣಿಯಾಗಿದ್ದರು. ಸಮಾಜದಲ್ಲಿ ಎಲ್ಲರೊಂದಿಗೆ ಬೆರೆತು, ಜನರ ಪ್ರೀತಿಗೆ ಪಾತ್ರರಾಗಿದ್ದವರು. ಇಂತಹ ಜನಪ್ರಿಯ ವ್ಯಕ್ತಿ ಇಂದು ನಮ್ಮನ್ನು ಅಗಲಿರುವುದು ಇಡೀ ಜಿಲ್ಲೆಗೆ ತುಂಬಲಾರದ ನಷ್ಟವಾಗಿದೆ’ ಎಂದು ಅಂತಿಮ ನಮನ ಸಲ್ಲಿಸಿದ ಸಂಸದ ಗೋವಿಂದ ಕಾರಜೋಳ ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-44-967035858

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.