7
ಆತ್ಮರಕ್ಷಣೆ, ಮಕ್ಕಳು ಹಾಗೂ ಮಹಿಳೆಯರ ಲೈಂಗಿಕ ದೌರ್ಜನ್ಯ ಕುರಿತ ಉಪನ್ಯಾಸದಲ್ಲಿ ಎಸ್‌ಪಿ ಶ್ರೀನಾಥ ಎಂ. ಜೋಷಿ

ಜಾಲತಾಣದಲ್ಲಿ ವೈಯಕ್ತಿಕ ಮಾಹಿತಿ ಹಂಚಿಕೊಳ್ಳಬೇಡಿ

Published:
Updated:
ಚಿತ್ರದುರ್ಗದ ಐಎಂಎ ಸಭಾಂಗಣದಲ್ಲಿ ಪದವಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣೆ, ಮಕ್ಕಳು ಹಾಗೂ ಮಹಿಳೆಯರ ಲೈಂಗಿಕ ದೌರ್ಜನ್ಯ ಕುರಿತು ಮಂಗಳವಾರ ನಡೆದ ಉಪನ್ಯಾಸ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ ಎಂ. ಜೋಷಿ ಉದ್ಘಾಟಿಸಿದರು.

ಚಿತ್ರದುರ್ಗ: ‘ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಕಾರಣಕ್ಕೂ ವೈಯಕ್ತಿಕ ವಿಚಾರಗಳನ್ನು ಹಂಚಿಕೊಳ್ಳಬೇಡಿ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ್ ಎಂ. ಜೋಷಿ ವಿದ್ಯಾರ್ಥಿನಿಯರಿಗೆ ಸಲಹೆ ನೀಡಿದರು.

ಇಲ್ಲಿನ ಐಎಂಎ ಸಭಾಂಗಣದಲ್ಲಿ ಇನ್ನರ್ ವ್ಹೀಲ್ ಕ್ಲಬ್ ಚಿತ್ರದುರ್ಗ ಫೋರ್ಟ್, ರೋಟರಿ ಕ್ಲಬ್ ಚಿತ್ರದುರ್ಗ ಫೋರ್ಟ್, ಜಿಲ್ಲಾ ಪೊಲೀಸ್ ಓಬವ್ವ ಪಡೆ ಹಾಗೂ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜು ಆಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪದವಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣೆ, ಮಕ್ಕಳು ಹಾಗೂ ಮಹಿಳೆಯರ ಲೈಂಗಿಕ ದೌರ್ಜನ್ಯದ ಕುರಿತು ವಿಶೇಷ ಉಪನ್ಯಾಸ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಫೇಸ್‌ಬುಕ್, ವಾಟ್ಸ್‌ಆ್ಯಪ್‌, ಇಮೇಲ್ ಸೇರಿ ಇತರೆ ಜಾಲತಾಣಗಳಲ್ಲಿ ವೈಯಕ್ತಿಕ ಮಾಹಿತಿ ಹಂಚಿಕೊಳ್ಳುವುದರಿಂದ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚು ಈ ಕುರಿತು ವಿದ್ಯಾರ್ಥಿನಿಯರು ಎಚ್ಚರವಹಿಸಬೇಕು ಎಂದರು. ಸಾಮಾಜಿಕ ಜಾಲತಾಣಗಳಲ್ಲಿ ಬರುವ ಕೆಲ ತಪ್ಪು ಮಾಹಿತಿಗಳ ಬಗ್ಗೆ ಯೋಚಿಸದೆ ಬೇರೆ ಗ್ರೂಪ್‌ಗಳಿಗೆ ಕಳುಹಿಸಿದರೆ ನೀವು ಕೂಡ ತಪ್ಪಿತಸ್ಥರಾಗುತ್ತೀರಿ. ತನಿಖೆ ಮೂಲಕ ಅಂತಹವರ ಮೇಲೂ ಕ್ರಮಕೈಗೊಳ್ಳಲಾಗುತ್ತದೆ ಎಂದರು.  ಯಾವ ದೇಶದಲ್ಲಿ ಕಾನೂನುಗಳನ್ನು ಗೌರವಿಸುತ್ತಾರೆ ಮತ್ತು ಪಾಲಿಸುತ್ತಾರೆ ಅಂತಹ ದೇಶಗಳು ಮಾತ್ರ ಮುಂದುವರೆದಿರುತ್ತವೆ. ಕಾನೂನುಗಳನ್ನು ಗೌರವಪೂರ್ವಕವಾಗಿ ಪಾಲಿಸುವವರು ಪ್ರಜ್ಞಾವಂತ ನಾಗರಿಕರು ಎಂದು ಅಭಿಪ್ರಾಯಪಟ್ಟರು.

ಮಹಿಳೆಯರ ಮೇಲೆ ಒಂದಲ್ಲ ಒಂದು ರೀತಿಯ ದೌರ್ಜನ್ಯ ನಡೆಯುತ್ತಲೇ ಇವೆ. ಪೊಲೀಸರು ಎಂದರೆ ಕೆಲವರು ಭಯಪಡುತ್ತಾರೆ. ಆದರೆ ಮಹಿಳೆಯರ ರಕ್ಷಣೆ ವಿಚಾರದಲ್ಲಿ ಓಬವ್ವ ಪಡೆ ಉತ್ತಮ ಕೆಲಸ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಓಬವ್ವ ಪಡೆಯನ್ನು ಪ್ರಾಯೋಗಿಕವಾಗಿ ನಡೆಸಲಾಗುತ್ತಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶೀಘ್ರದಲ್ಲೇ ಅಧಿಕೃತವಾಗಿ ಉದ್ಘಾಟನೆ ಮಾಡಲಾಗುತ್ತದೆ ಎಂದು ಹೇಳಿದರು. ಮಹಿಳೆಯರು ತೊಂದರೆ, ಅಪಾಯದಲ್ಲಿರುವಾಗ ಯಾವ ರೀತಿ ತಮ್ಮನ್ನು ತಾವು ಸ್ವಯಂ ರಕ್ಷಣೆ ಮಾಡಿಕೊಳ್ಳಬೇಕು ಎಂಬುದರ ಕುರಿತು ಓಬವ್ವ ಪಡೆ ಪ್ರಾತ್ಯಕ್ಷಿಕೆ ಮೂಲಕ ತಿಳಿಸಿಕೊಟ್ಟಿತು.

ಎಎಸ್‌ಪಿ ಡಾ. ರಾಮ್ ಎಲ್. ಅರಸಿದ್ದಿ, ಡಿವೈಎಸ್‌ಪಿ ಸಂತೋಷ್, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಲಕ್ಷ್ಮೀನಾರಾಯಣ, ಸಂಚಾರಿ ಪೊಲೀಸ್ ಠಾಣೆ ಪಿಎಸ್‌ಐ ಬಸವರಾಜ್, ಇನ್ನರ್ ವ್ಹೀಲ್ ಕ್ಲಬ್ ಚಿತ್ರದುರ್ಗ ಪೋರ್ಟ್‌ನ ಸವಿತಾ, ಶೈಲಜಾ ಇದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !