ಚಿತ್ರದುರ್ಗ: ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ರೂಪಾ (50) ಅನುಮಾನಸ್ಪದ ರೀತಿಯಲ್ಲಿ ಮೃತ ಪಟ್ಟಿದ್ದಾರೆ. ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ವಿ.ಪಿ. ಬಡಾವಣೆಯ ಮನೆಯಲ್ಲಿ ರೂಪಾ ಸೋಮವಾರ ಶವವಾಗಿ ಪತ್ತೆಯಾಗಿದ್ದಾರೆ. ರೂಪಾ ಅವರು ಗಿರಿಶಾಂತ ಆರ್ಥೋ ಕೇರ್ ಸೆಂಟರ್‌ನ ಡಾ.ಕೆ.ಜಿ.ರವಿ ಅವರ ಪತ್ನಿ.

ಸೋಮವಾರ ಬೆಳಿಗ್ಗೆ ರೂಪಾ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಮನೆಯ ಕೆಲಸಗಾರರು ಗಮನಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಡಾ.ಕೆ.ಜಿ.ರವಿ ಪರಿಶೀಲಿಸಿದಾಗ ಪತ್ನಿ ಮೃತಪಟ್ಟಿದ್ದು ಖಚಿತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಡ್‌ರೂಮಿನ ಟೇಬಲ್ ಮೇಲೆ ಡೆತ್‌ನೋಟ್ ಪತ್ತೆಯಾಗಿದೆ. ಇದರ ಆಧಾರದ ಮೇರೆಗೆ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ‘ರಿವಾಲ್ವರ್‌ನಿಂದ ಹಾರಿದ ಗುಂಡು ತಲೆಗೆ ತಗುಲಿ ರೂಪಾಮೃತಪಟ್ಟಿದ್ದಾರೆ.

ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯದ ತಂಡ ಪರಿಶೀಲನೆ ನಡೆಸಲಿದೆ. ಮಂಗಳವಾರ ಶವಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಗುವುದು. ರೂಪಾ ಅವರ ಸಹೋದರ ದೂರು ನೀಡಿದ್ದಾರೆ. ತನಿಖೆ ಪ್ರಗತಿಯಲ್ಲಿರುವ ಕಾರಣಕ್ಕೆ ಡೆತ್‌ನೋಟ್ ಮಾಹಿತಿ ಬಹಿರಂಗಪಡಿಸಲು ಸಾಧ್ಯವಿಲ್ಲ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.