ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಚ್ಚರ ಬಗ್ಗೆ ಯಾರಾದರೂ ಮಾತಾಡ್ತಾರಾ?: ಹೆಗಡೆ ವಿರುದ್ಧ ಎಚ್.ಆಂಜನೇಯ ಕಿಡಿ

Published 16 ಜನವರಿ 2024, 5:35 IST
Last Updated 16 ಜನವರಿ 2024, 5:35 IST
ಅಕ್ಷರ ಗಾತ್ರ

ಚಿತ್ರದುರ್ಗ: ‘ಹುಚ್ಚರ ಬಗ್ಗೆ ಯಾರಾದರೂ ಮಾತಾಡ್ತಾರಾ?’ ‘ಅನಂತ ಕುಮಾರ್‌ ಹೆಗಡೆ ಒಬ್ಬ ಹುಚ್ಚ. ಹುಚ್ಚರ ಬಗ್ಗೆ ಯಾರಾದರೂ ಮಾತಾಡ್ತಾರಾ?. ಅವನ ಬಗ್ಗೆ ಮಾತಾಡಲ್ಲ. ಅವನ ಬಗ್ಗೆ ಮಾತಾಡಿ ದೊಡ್ಡವನನ್ನಾಗಿಸಿದಂತೆ ಆಗುತ್ತದೆ’ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.

‘ರಾಮರಾಜ್ಯದ ಕನಸು ಅನಾವರಣ ಮಾಡಿ ಕಾರ್ಯರೂಪಕ್ಕೆ ತಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಹಗುರವಾಗಿ ಮಾತನಾಡಿರುವ ಅನಂತ ಕುಮಾರ್‌ ಒಬ್ಬ ಮನುಷ್ಯನಾ ?. ಅವನು ಬೆಳೆದ ಹಿನ್ನೆಲೆ ಸಂಸ್ಕೃತಿ ಅದೇ ರೀತಿ ಇರಬೇಕು. ಹೀಗಾಗಿ ಅವನು ಆ ರೀತಿ ವರ್ತನೆ ಮಾಡುತ್ತಾನೆ. ನಾವು ಆ ರೀತಿ ಅಲ್ಲ ನಾನು ಸಹ ಏಕವಚನ ಬಳಸಬಾರದು. ಆದರೆ ಅವನಿಗೆ ಯಾವ ಭಾಷೆ ಬಳಸಿದರೂ ಕೂಡ ಸಾಲದು’ ಎಂದು ಕಿಡಿಕಾರಿದರು.

‘ಕಾಂಗ್ರೆಸ್ ರಾಮ ಹಿಂದೂ ವಿರೋಧಿ ಅಲ್ಲ. ನಾವು ಎಲ್ಲ ಧರ್ಮಗಳ ಪರವಿದ್ದೇವೆ. ಬಹಳಷ್ಟು ಜನ ಹಿಂದೂಗಳಿರುವುದೇ ಕಾಂಗ್ರೆಸ್‌ ಪಕ್ಷದಲ್ಲಿ. ರಾಮನ ಹೆಸರಿನಲ್ಲಿ ಮತಕ್ಕಾಗಿ ವ್ಯಾಪಾರ ಮಾಡುವವರು ಕಾಂಗ್ರೆಸ್ಸಿಗರಲ್ಲ. ಆಂಜನೇಯನ ಹೃದಯದಲ್ಲಿ ರಾಮನಿದ್ದಂತೆ ಕೋಟ್ಯಂತರ ಕಾಂಗ್ರೆಸ್ಸಿಗರ ಹೃದಯದಲ್ಲಿ ಸಹ ಇದ್ದಾನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT