ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೊಳಕಾಲ್ಮುರು | ಅಡ್ಡ ಬಂದ ನಾಯಿ: ಬೈಕ್ ಸವಾರ ಸಾವು

Published 18 ಜೂನ್ 2024, 14:35 IST
Last Updated 18 ಜೂನ್ 2024, 14:35 IST
ಅಕ್ಷರ ಗಾತ್ರ

ಮೊಳಕಾಲ್ಮುರು: ಚಲಿಸುತ್ತಿದ್ದ ಬೈಕ್‌ಗೆ ನಾಯಿಯೊಂದು ಅಡ್ಡ ಬಂದು, ಬೈಕ್‌ ಆಯತಪ್ಪಿ ಬಿದ್ದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಪಟ್ಟಣದಿಂದ ಹಾನಗಲ್‌ ಸಂಪರ್ಕಿಸುವ ರಸ್ತೆಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ಮೃತನನ್ನು ಆಂಧ್ರ ಪ್ರದೇಶದ ರಾಯದುರ್ಗದ ವೆಂಕಟೇಶಲು (30) ಎಂದು ಗುರುತಿಸಲಾಗಿದೆ.

ತಲೆಗೆ ಬಲವಾದ ಪೆಟ್ಟು ಬಿದ್ದಿದ್ದ ಗಾಯಾಳುವನ್ನು ಸ್ಥಳೀಯ ಅಗ್ನಿಶಾಮಕ ಮತ್ತು ತುರ್ತು ಚಿಕಿತ್ಸಾ ಸಿಬ್ಬಂದಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಗಾಯಾಳು ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT