ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಹಿತ್ಯ ಸಮ್ಮೇಳನಾಧ್ಯಕ್ಷರ ಆಯ್ಕೆಗೆ ಅಪಸ್ವರ ಸಲ್ಲ: ಇತಿಹಾಸ ತಜ್ಞ ರಾಜಶೇಖರಪ್ಪ

Last Updated 5 ಡಿಸೆಂಬರ್ 2019, 20:15 IST
ಅಕ್ಷರ ಗಾತ್ರ

ಚಿತ್ರದುರ್ಗ: 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇ ಳನದ ಸರ್ವಾಧ್ಯಕ್ಷರನ್ನಾಗಿ ಕವಿ ಡಾ.ಎಚ್‌.ಎಸ್‌. ವೆಂಕಟೇಶಮೂರ್ತಿ ಅವರನ್ನು ಆಯ್ಕೆ ಮಾಡಿರುವುದಕ್ಕೆ ಅಪಸ್ವರ ಎದ್ದಿರುವುದು ಸರಿಯಲ್ಲ ಎಂದು ಇತಿಹಾಸ ತಜ್ಞ ಡಾ.ಬಿ. ರಾಜಶೇಖರಪ್ಪ ಅಭಿಪ್ರಾಯಪಟ್ಟಿದ್ದಾರೆ.

‘ಕಲ್ಯಾಣ ಕರ್ನಾಟಕದ ಸಾಹಿತಿ ಗಳನ್ನು ಆಯ್ಕೆ ಮಾಡದೇ ಇರುವುದಕ್ಕೆ ಆಕ್ಷೇಪ ವ್ಯಕ್ತವಾಗಿರುವುದು ಅಚ್ಚರಿ ಮೂಡಿಸಿದೆ. ವೆಂಕಟೇಶಮೂರ್ತಿ ಅವರನ್ನು ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದ್ದು ಸೂಕ್ತವಾಗಿದೆ. ಸಾಹಿತಿಗಳು ಜಾತಿ, ಧರ್ಮ, ಪ್ರದೇಶಕ್ಕೆ ಸೀಮಿತವಾದವರಲ್ಲ. ಜಾತಿ, ಪ್ರದೇಶ ಪರಿಗಣಿಸಬೇಕು ಎಂದು ಅಪೇಕ್ಷೆಪಡುವುದು ಸರಿಯಲ್ಲ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT