ಮಂಗಳವಾರ, ಮಾರ್ಚ್ 21, 2023
20 °C

ಪಾನಮತ್ತ ಬೇಡರರೆಡ್ಡಿಹಳ್ಳಿ ಪಿಡಿಒ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಳ್ಳಕೆರೆ: ಪಾನಮತ್ತನಾಗಿ ಪದೇ ಪದೆ ಕರ್ತವ್ಯ ಲೋಪವೆಸಗುತ್ತಿದ್ದ ತಾಲ್ಲೂಕಿನ ತಳಕು ಹೋಬಳಿ ವ್ಯಾಪ್ತಿಯ ಬೇಡರರೆಡ್ಡಿಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಹನುಮಂತಕುಮಾರ್ ಎಂಬಾತನನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಸಿಇಒ ದಿವಾಕರ್‌ ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಎಸ್.ಹನುಮಂತಕುಮಾರ್, ಕರ್ತವ್ಯಕ್ಕೆ ಹಾಜರಾಗದೆ ಪಾನಮತ್ತನಾಗಿ ನಗರದ ಬಸ್ ನಿಲ್ದಾಣದಲ್ಲಿ ಬಿದ್ದಿರುತ್ತಿದ್ದರು. ಕಚೇರಿ ವೇಳೆಯಲ್ಲೇ ಮದ್ಯಸೇವನೆ ಮಾಡುತ್ತಿದ್ದರು. ಇದೇ ಪ್ರವೃತ್ತಿಯನ್ನು ಮುಂದುವರಿಸಿದ್ದರು. ಮೇಲಧಿಕಾರಿಗಳ ಯಾವುದೇ ಪೂರ್ವಾನುಮತಿ ಪಡೆಯದೇ ಕರ್ತವ್ಯಕ್ಕೆ ಅನಧಿಕೃತವಾಗಿ ಗೈರು ಹಾಜರಾಗುತ್ತಿದ್ದರು.

ಇ-ಸ್ವತ್ತು, ಕುಡಿಯುವ ನೀರಿನ ತೊಂದರೆಯಾಗುತ್ತಿತ್ತು. ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮಸ್ಥರು ತಾಲ್ಲೂಕು ಪಂಚಾಯಿತಿ ಇಒಗೆ ದೂರು ನೀಡಿದ್ದರು. ಈ ನಿಟ್ಟಿನಲ್ಲಿ ಸಿಇಒ ಕ್ರಮ ಕೈಗೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು