ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಕ್ಕಜಾಜೂರು: ₹ 5 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗೆ ಚಾಲನೆ

Published 27 ಆಗಸ್ಟ್ 2024, 15:57 IST
Last Updated 27 ಆಗಸ್ಟ್ 2024, 15:57 IST
ಅಕ್ಷರ ಗಾತ್ರ

ಚಿಕ್ಕಜಾಜೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾವಲುಹಟ್ಟಿ ಗ್ರಾಮದಲ್ಲಿ ಚೆಕ್‌ ಡ್ಯಾಂ ಕಂ ಕಾಸ್ವೆ ನಿರ್ಮಾಣ, ಚೆಕ್‌ ಡ್ಯಾಂ ಕಂ ಬ್ರಿಡ್ಜ್‌ ನಿರ್ಮಾಣ, ಜಿನುಗು ಕೆರೆ ಅಭಿವೃದ್ಧಿ ಕಾಮಗಾರಿ ಸೇರಿ ₹ 5 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಾಸಕ ಎಂ. ಚಂದ್ರಪ್ಪ ಮಂಗಳವಾರ ಚಾಲನೆ ನೀಡಿದರು.

ಚಿಕ್ಕಂದವಾಡಿಯಿಂದ ಚಿಕ್ಕಜಾಜೂರು ಗ್ರಾಮಗಳ ನಡುವೆ ₹ 11 ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿ ಆರಂಭಿಸಲಾಗಿದೆ. ₹ 15 ಕೋಟಿ ವೆಚ್ಚದಲ್ಲಿ ಚಿಕ್ಕಜಾಜೂರಿನಲ್ಲಿ ಹೈಟೆಕ್‌ ಆಸ್ಪತ್ರೆಯನ್ನು ನಿರ್ಮಿಸಲಾಗಿದ್ದು, ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದೆ. ₹ 440 ಕೋಟಿ ವೆಚ್ಚದಲ್ಲಿ ವಾಣಿವಿಲಾಸ ಸಾಗರದಿಂದ ತಾಲ್ಲೂಕಿನಾದ್ಯಂತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ವಿವಿಧ ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ, ಶಾಲಾ ಕಾಲೇಜು ನಿರ್ಮಾಣ, ಸಿಸಿ ರಸ್ತೆ, ಡಾಂಬರ್‌ ರಸ್ತೆ, ಚರಂಡಿ, ಗೋಕಟ್ಟೆ ನಿರ್ಮಾಣ ಮಾಡಲಾಗಿದೆ ಎಂದು ಶಾಸಕ ಚಂದ್ರಪ್ಪ ತಿಳಿಸಿದರು.

ಡಿ.ಸಿ. ಮೋಹನ್‌ ಹಾಗೂ ನಿವೃತ್ತ ಶಿಕ್ಷಕ ಕೃಷ್ಣಮೂರ್ತಿ ಮಾತನಾಡಿದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶಶಿಕಲಾ ನಾಗರಾಜ್‌, ಸದಸ್ಯರಾದ ಲಕ್ಷ್ಮಿ, ಶ್ರೀಕಾಂತ್‌ ಮಠದ್‌, ಜಮೀರ್‌ ಬಾಷಾ, ಕದೀರ್‌, ಗಂಗಾಧರ್‌, ಬಾಬು, ಸಣ್ಣ ನೀರಾವರಿ ಇಲಾಖೆ ಎಇಇ ನಾಗರಾಜ್‌, ಪಿಡಿಒ ಜಯಪ್ಪ, ಕಾರ್ಯದರ್ಶಿ ತಿಪ್ಪೇಸ್ವಾಮಿ, ಗ್ರಾಮದ ಮುಖಂಡರು, ಪೊಲೀಸ್‌ ಸಿಬ್ಬಂದಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT