ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿತ್ರದುರ್ಗ | 'ದಲಿತರ ಮೇಲೆ ಹಲ್ಲೆಯನ್ನು ಗಂಭೀರವಾಗಿ ಪರಿಗಣಿಸಿ'

Published : 17 ಸೆಪ್ಟೆಂಬರ್ 2024, 16:00 IST
Last Updated : 17 ಸೆಪ್ಟೆಂಬರ್ 2024, 16:00 IST
ಫಾಲೋ ಮಾಡಿ
Comments

ಚಿತ್ರದುರ್ಗ: ರಾಜ್ಯದಲ್ಲಿ ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ, ಸಾಮಾಜಿಕ ಬಹಿಷ್ಕಾರದಂತಹ ಘಟನೆಗಳು ನಡೆಯುತ್ತಿದ್ದರೂ ಸರ್ಕಾರ ಮಾತ್ರ ಕಠಿಣ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಮುಖಂಡ ಬಾಳೆಕಾಯಿ ಶ್ರೀನಿವಾಸ್‌ ಆರೋಪಿಸಿದರು.

‘ರಾಜ್ಯದ ಪ್ರತಿ ಗ್ರಾಮದಲ್ಲೂ ಅಸ್ಪೃಶ್ಯತೆ ಆಚರಣೆ ಕೊನೆಗೊಂಡಿಲ್ಲ. ಕಾಂಗ್ರೆಸ್ ನಾಯಕರು ತೋರ್ಪಡಿಕೆಗೆ ದಲಿತರ ಪರ ಎಂದು ಹೇಳುತ್ತಿದ್ದಾರೆ. ಆದರೆ ಘಟನೆಗಳು ನಡೆದಾಗ ಮಾತ್ರ ಕ್ರಮ ವಹಿಸುತ್ತಿಲ್ಲ. ಕೂಡಲೇ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿಸ್ಥರಿಗೆ ಶಿಕ್ಷೆ ವಿಧಿಸಬೇಕು’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. 

‘ಶಾಸಕ ಮುನಿರತ್ನ ಅವರನ್ನು ಬಿಜೆಪಿ ಉಚ್ಛಾಟಿಸಬೇಕು. ಈ ಮೂಲಕ ದಲಿತರ ಪರ ಇದ್ದೇವೆ ಎಂಬ ನಿಲುವು ಪ್ರದರ್ಶಿಸಬೇಕು’ ಎಂದು ಆಗ್ರಹಿಸಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಬಂದು 18 ತಿಂಗಳಾದರೂ ಸಾಮಾಜಿಕ ನ್ಯಾಯ ಕೊಡುತ್ತಿಲ್ಲ. ಇದೇ ರೀತಿ ಮುಂದುವರೆದರೆ ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ತಕ್ಕಪಾಠ ಕಲಿಸಲಾಗುತ್ತದೆ’ ಎಂದು ಎಚ್ಚರಿಸಿದರು.

ಡಿಎಸ್‌ಎಸ್‌ ರಾಜ್ಯ ಘಟಕದ ಅಧ್ಯಕ್ಷ ಕುಂಚಿಗನಹಾಳ್‌ ಮಹಾಲಿಂಗಪ್ಪ, ಮುಖಂಡರಾದ ಕೆ.ರಾಜಣ್ಣ, ಕಸ್ತೂರಪ್ಪ, ಮಲ್ಲಿಕಾರ್ಜುನ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT