ಮಂಗಳವಾರ, ಮಾರ್ಚ್ 28, 2023
23 °C

ಚಿತ್ರದುರ್ಗ: ಹೃದಯಾಘಾತದಿಂದ ಡಿವೈಎಸ್ಪಿ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಡಿಸಿಆರ್‌ಬಿ ವಿಭಾಗದ ಡಿವೈಎಸ್‌ಪಿ ಎನ್.ರಮೇಶ್ (50) ಮಂಗಳವಾರ ತೀವ್ರ ಹೃದಯಾಘಾತದಿಂದ ನಿಧನರಾದರು.

ಇವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ಕೋಲಾರ ಜಿಲ್ಲೆ ಮಾಲೂರಿನಲ್ಲಿ ಬುಧವಾರ ಅಂತ್ಯಕ್ರಿಯೆ ನೆರವೇರಲಿದೆ.

ಬೆಳಗಿನ ವಾಯುವಿಹಾರ ಮುಗಿಸಿ ವಸತಿಗೃಹಕ್ಕೆ ಮರಳಿದಾಗ ಎದೆನೋವು ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ. ತಕ್ಷಣ ಅವರನ್ನು ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಲಾಗಿದೆ. ತೀವ್ರ ಹೃದಯಾಘತವಾಗಿದ್ದರಿಂದ ಚಿಕಿತ್ಸೆಗೆ ಸ್ಪಂದಿಸದೇ ನಿಧನರಾದರು ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಕೋಲಾರ ಜಿಲ್ಲೆ ಮಾಲೂರಿನ ರಮೇಶ್‌ ಅವರು ಹಿರಿಯೂರು ಉಪವಿಭಾಗದ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಚಿತ್ರದುರ್ಗ ಡಿಸಿಆರ್‌ಬಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಕುಟುಂಬ ಬೆಂಗಳೂರಿನಲ್ಲಿ ನಡೆಸಿದ್ದು, ದೀಪಾವಳಿ ಹಬ್ಬಕ್ಕೆ ಚಿತ್ರದುರ್ಗಕ್ಕೆ ಬಂದಿದ್ದರು.

ಮರಣೋತ್ತರ ಪರೀಕ್ಷೆಯ ಬಳಿಕ ಪಾರ್ಥಿವ ಶರೀರವನ್ನು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್‌ ಪಡೆಯ ಮೈದಾನಕ್ಕೆ ತರಲಾಯಿತು. ಸರ್ಕಾರ ಗೌರವ ಸಲ್ಲಿಸಿ ಪಾರ್ಥಿವ ಶರೀರವನ್ನು ಕೋಲಾರಕ್ಕೆ ಕಳುಹಿಸಲಾಯಿತು. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ನಿಧನಕ್ಕೆ ನಿಖರ ಕಾರಣ ತಿಳಿಯಲಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ರಾಧಿಕಾ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು