ಹಿರಿಯೂರು: ‘ವಿದ್ಯೆ ಕಲಿಯದ ಬದುಕಿಗೆ ಅರ್ಥವೇ ಇಲ್ಲ. ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಶಿಕ್ಷಣವೇ ಮದ್ದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ನಗರದ ಸರ್ಕಾರಿ ಪಿಯು ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ನೂತನ ತರಗತಿ ಕೊಠಡಿಗಳು, ಕಂಪ್ಯೂಟರ್ ಲ್ಯಾಬ್, ಸ್ಮಾರ್ಟ್ ಕ್ಲಾಸ್ ಹಾಗೂ ಡಿಜಿಟಲ್ ಬೋರ್ಡ್ ಹಾಗೂ ಕ್ರೀಡಾ, ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಕೋಟ್ಯಂತರ ಜನರಿಗೆ ಬದುಕು ಕಲ್ಪಿಸಿಕೊಟ್ಟಿರುವ ಸರ್ಕಾರಿ ಶಾಲೆಗಳನ್ನು ಉಳಿಸಬೇಕೆಂಬುದು ಸರ್ಕಾರದ ಮುಖ್ಯ ಧ್ಯೇಯ. ಹೀಗಾಗಿ ಉಚಿತ ಪಠ್ಯ, ಸಮವಸ್ತ್ರ, ಮಧ್ಯಾಹ್ನದ ಬಿಸಿಯೂಟ, ಕಡಿಮೆ ಶುಲ್ಕ ಇಷ್ಟಲ್ಲದೆ ವಿದ್ಯಾರ್ಥಿ ವೇತನ ವ್ಯವಸ್ಥೆ ಮಾಡಿದೆ. ಆದರೂ ಪೋಷಕರು ಮನೆಯ ಸಮೀಪ ಇರುವ ಸರ್ಕಾರಿ ಶಾಲೆಯ ಬದಲು ದುಬಾರಿ ಶುಲ್ಕ ವಸೂಲಿ ಮಾಡುವ ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುತ್ತಿರುವುದು ಬೇಸರದ ಸಂಗತಿ’ ಎಂದು ತಿಳಿಸಿದರು.

’ತಾಲ್ಲೂಕಿನಲ್ಲಿ ಪಿಯು ಕಾಲೇಜುಗಳಲ್ಲಿ ಕೊಠಡಿಗಳ ಕೊರತೆಯಿಲ್ಲ. ಶಿಕ್ಷಣದಲ್ಲಿ ಹೊಸ ಆವಿಷ್ಕಾರ ಬರುತ್ತಿದ್ದು, ಅದರ ಬಗ್ಗೆ ಮೊದಲು ಶಿಕ್ಷಕರಿಗೆ ತದನಂತರ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕಿದೆ. ಶಿಕ್ಷಣದಲ್ಲಿ ಹೊಸತನ ತರುವ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಗ್ರಂಥಾಲಯ ಹಾಗೂ ವಾಚನಾಲಯ ತೆರೆದು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸೂಕ್ತ ತಯಾರಿಗೆ ಅವಕಾಶ ಮಾಡಿಕೊಡಬೇಕು. ತಾಲ್ಲೂಕಿನಲ್ಲಿ 226 ಶಾಲೆಗಳ 512 ಕೊಠಡಿಗಳು ಬಿದ್ದಿದ್ದು, ವಿಶೇಷ ಅನುದಾನದಡಿ ನೂತನ ಕೊಠಡಿಗಳ ನಿರ್ಮಾಣ ಮಾಡಿಕೊಡುವ ಭರವಸೆಯನ್ನು ಶಾಲಾ ಶಿಕ್ಷಣ ಸಚಿವರು ನೀಡಿರುವುದಾಗಿ‘ ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್ ಹೇಳಿದರು.

ಕಾರ್ಯಕ್ರಮದಲ್ಲಿ ದತ್ತಿನಿಧಿ ದಾನಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಶಶಿಕಲಾ ಸುರೇಶಬಾಬು ಮಾತನಾಡಿದರು.

ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಜಿ.ಧನಂಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷ ಆರ್.ಬಾಲಕೃಷ್ಣ, ಉಪಾಧ್ಯಕ್ಷೆ ಮಂಜುಳಾ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಮಮತಾ, ಎಂ.ಡಿ.ಸಣ್ಣಪ್ಪ, ರತ್ನಮ್ಮ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಟಿ.ಕೃಷ್ಣಮೂರ್ತಿ, ಖಾದಿರಮೇಶ್, ಈರಲಿಂಗೇಗೌಡ, ಪ್ರಾಂಶುಪಾಲ ಆರ್. ನಾಗರಾಜ್, ಉಪನ್ಯಾಸಕ ಜಿ.ಡಿ.ಚಿತ್ತಣ್ಣ ಹಾಜರಿದ್ದರು.

350 ಶಾಲಾ ಕೊಠಡಿ ನಿರ್ಮಾಣಕ್ಕೆ ಶೀಘ್ರ ಚಾಲನೆ

‘ತಾಲ್ಲೂಕಿನಲ್ಲಿ ಶೀಘ್ರದಲ್ಲಿಯೇ 350 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಶಾಲಾ ಶಿಕ್ಷಣ ಹಾಗೂ ಸಾರ್ವಜನಿಕ ಇಲಾಖೆ ಸಚಿವ ಮಧು ಬಂಗಾರಪ್ಪ ಭೂಮಿ ಪೂಜೆ ಮಾಡಲಿದ್ದಾರೆ’ ಎಂದು ಸಚಿವ ಸುಧಾಕರ್ ಹೇಳಿದರು. ‘ಎಲ್ಲರಿಗೂ ಅಕ್ಷರ ಜ್ಞಾನ ನೀಡಬೇಕೆಂಬುದು ಸರ್ಕಾರದ ನಿರ್ಧಾರ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳ ಉಳಿವಿಗೆ ಪ್ರತಿ ವರ್ಷ ಬಜೆಟ್ನಲ್ಲಿ ಸಾವಿರಾರು ಕೋಟಿ ರೂಪಾಯಿ ಮೀಸಲಿಡಲಾಗುತ್ತಿದೆ. ಬಡವರು ಸಾಲ ಮಾಡಿ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ದಾಖಲಿಸುವ ಬದಲು ಪ್ರತಿಭಾವಂತ ಶಿಕ್ಷಕರಿರುವ ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು. ಶಿಕ್ಷಕರು ಪೋಷಕರ ಮನವೊಲಿಸಿ ಶಾಲೆಯ ದಾಖಲಾತಿ ಹೆಚ್ಚಿಸಿಕೊಳ್ಳುವ ಪ್ರಯತ್ನ ಮಾಡಬೇಕು‘ ಎಂದು ಸಲಹೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.