ಶನಿವಾರ, ಜೂನ್ 19, 2021
21 °C

ಚುನಾವಣೆ ಮುಂದೂಡಲು ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಕೊರೊನಾ ಸೋಂಕಿನ ಕಾರಣಕ್ಕೆ ಮನೆಯಿಂದ ಹೊರಬರದ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯನ್ನು ಮುಂದೂಡುವುದು ಸೂಕ್ತ ಎಂದು ರಾಜ್ಯ ಘಟಕದ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಕೆ.ರವಿ ಅಂಬೇಕರ್ ಮನವಿ ಮಾಡಿದ್ದಾರೆ.

ಮತದಾನ ಮೇ 9ಕ್ಕೆ ನಿಗದಿಯಾಗಿದೆ. ಈ ಹೊತ್ತಿಗೆ ಕೊರೊನಾ ಸೋಂಕು ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ. 45 ವರ್ಷ ಮೇಲ್ಪಟ್ಟವರು ಮತಗಟ್ಟೆಗೆ ಬರುವುದು ಅನುಮಾನ. ಪೂರ್ಣಪ್ರಮಾಣದ ಮತ ಚಲಾವಣೆ ಆಗದಿದ್ದರೆ ಉತ್ತಮ ಅಭ್ಯರ್ಥಿಯ ಆಯ್ಕೆ ಸಾಧ್ಯವಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಕೊರೊನಾ ಸೋಂಕಿನ ಕಾರಣಕ್ಕೆ ಮತದಾರರನ್ನು ಭೇಟಿಯಾಗಲು ಅಭ್ಯರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ. ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕಿಸಲು ಸಾಧ್ಯವಿದೆಯಾದರೂ ಕೋವಿಡ್‌ ಅಪಾಯ ತಪ್ಪಿದ್ದಲ್ಲ. ಮತದಾರರ ಜೀವಕ್ಕಿಂತ ಚುನಾವಣೆ ದೊಡ್ಡದಲ್ಲ. ಕೋವಿಡ್‌ ಎರಡನೇ ಅಲೆ ಕ್ಷೀಣಿಸುವವರೆಗೆ ಚುನಾವಣೆ ಮುಂದೂಡುವುದು ಸೂಕ್ತ ಎಂದು ಆಗ್ರಹಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು