ಸೋಮವಾರ, ಆಗಸ್ಟ್ 15, 2022
21 °C
ಅಂತರ ಪಾಲನೆ, ಮಾಸ್ಕ್ ಧರಿಸಲು ಸೂಚನೆ

ಚುನಾವಣೆ: ಕೊರೊನಾ ಪರೀಕ್ಷೆ ಕಡ್ಡಾಯ

ಕೊಂಡ್ಲಹಳ್ಳಿ ಜಯಪ್ರಕಾಶ Updated:

ಅಕ್ಷರ ಗಾತ್ರ : | |

Prajavani

ಮೊಳಕಾಲ್ಮುರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳಿಗೆ ಕೊರೊನಾ ಪರೀಕ್ಷೆಗೆ ಕಡ್ಡಾಯವಾಗಿ ಒಳಗಾಗುವ ಅನಿವಾರ್ಯತೆ ಎದುರಾಗಿದೆ.

ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೆ ಮುನ್ನ ಆರೋಗ್ಯ ಸ್ಥಿತಿ ಅಂಕಿ–ಅಂಶಗಳನ್ನೂ ದಾಖಲಿಸಬೇಕಾಗಿದೆ. ಇದು ಕಡ್ಡಾಯವಾಗಿದೆ. ಸರ್ಕಾರ ರೂಪಿಸಿ
ರುವ ಎಲ್ಲ ರೀತಿ ಮುನ್ನೆಚ್ಚರಿಕೆ ಮಾರ್ಗಸೂಚಿಗಳನ್ನು ಪಾಲಿಸಬೇಕಿ
ರುವುದು ಅಭ್ಯರ್ಥಿಗಳ ಮೇಲಿನ ಹೆಚ್ಚುವರಿ ಹೊಣೆಯಾಗಿದೆ.

ಇದಕ್ಕಾಗಿ ಆರೋಗ್ಯ ಇಲಾಖೆ ಪ್ರತಿ ಗ್ರಾಮ ಪಂಚಾಯಿತಿಗೆ 4 ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಿದೆ. ಇಬ್ಬರು ಕಾರ್ಯಕರ್ತೆಯರ ತಂಡ ಬೆಳಿಗ್ಗೆ ಹಾಗೂ ಮಧ್ಯಾಹ್ನ ಕಚೇರಿ ಸಮಯದಲ್ಲಿ ಪಾಳಿಯಲ್ಲಿ ಕೆಲಸ
ಮಾಡುತ್ತಿವೆ. ತಾಲ್ಲೂಕಿನ 16 ಗ್ರಾಮ ಪಂಚಾಯಿತಿಗಳಲ್ಲಿ 32 ತಂಡಗಳನ್ನು ಮಾಡಿ ಒಟ್ಟು 64 ಆಶಾ ಕಾರ್ಯಕರ್ತೆಯರನ್ನು ನಿಯೋಜಿಸ
ಲಾಗಿದೆ ಎಂದು ವೈದ್ಯಾಧಿಕಾರಿ ಡಾ.ಮಧುಕುಮಾರ್ ತಿಳಿಸಿದರು.

‘ನಾಮಪತ್ರ ಸಲ್ಲಿಸಲು ಬರುವ ಅಭ್ಯರ್ಥಿಗಳು ಹಾಗೂ ಅವರ ಜತೆ ಬರುವ ಬೆಂಬಲಿಗರ ದೇಹದ ಉಷ್ಣಾಂಶ ಪರೀಕ್ಷೆ (ಥರ್ಮಲ್ ಸ್ಕ್ಯಾನಿಂಗ್) ಕಡ್ಡಾಯವಾಗಿ ಮಾಡಲಾಗುತ್ತಿದೆ. ನಂತರ ಸಾನಿಟೈಸ್‌ ಮಾಡಲಾಗುತ್ತದೆ. ಕಡ್ಡಾಯವಾಗಿ ಅಂತರ ಪಾಲನೆ ಮಾಡಬೇಕಿದೆ. ಅಭ್ಯರ್ಥಿಯ ಜತೆ 50ಕ್ಕೂ ಹೆಚ್ಚು ಜನರು ಭಾಗವಹಿಸುವಂತಿಲ್ಲ. ಎಲ್ಲ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು’ ಎಂದು ತಿಳಿಸಿದರು.

‘ನಾಮಪತ್ರ ಸಲ್ಲಿಸಲು ಬರುವ ಅಭ್ಯರ್ಥಿಗಳು ಕಡ್ಡಾಯವಾಗಿ ನಿಯಮ ಪಾಲಿಸುವಂತೆ ಪಿಡಿಒಗಳಿಗೆ ಮನವಿ ಮಾಡಲಾಗಿದೆ. ಪಿಡಿಒಗಳು ಇದರ ಹೊಣೆಯನ್ನು ಹೊತ್ತು ಸಹಕಾರ ನೀಡಬೇಕು. ಈ ಮೂಲಕ ಸಾಂಕ್ರಾಮಿಕ ರೋಗ ಚುನಾವಣೆ ಸಮಯದಲ್ಲಿ ಹರಡದಂತೆ ಎಲ್ಲರೂ ಸಹಕಾರ ನೀಡಬೇಕು’ ಎಂದು ಆಶಾ ಕಾರ್ಯಕರ್ತೆಯೊಬ್ಬರು ಹೇಳಿದರು.

‘ಚುನಾವಣೆ ನಾಮಪತ್ರ ಸಲ್ಲಿಕೆ ವೇಳೆ ಗುಂಪು ಗುಂಪಾಗಿ ಜನ ಬರುತ್ತಾರೆ. ಆದರೆ, ಅವರನ್ನು ಕಚೇರಿ ಒಳಗೆ ಬಿಟ್ಟುಕೊಳ್ಳುತ್ತಿಲ್ಲ. ಕೆಲವು ಅಭ್ಯರ್ಥಿಗಳ ಬೆಂಬಲಿಗರು ಗಲಾಟೆ ಮಾಡುತ್ತಾರೆ. ಕೊರೊನಾ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ’ ಎಂದು ಚುನಾವಣಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ಶಾಲೆ ಪ್ರಾಂಶುಪಾಲ ನಾಗರಾಜ್ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.