ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಪತ್ರೆಯಲ್ಲಿ ವಿದ್ಯುತ್‌ ಲೋಪ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

Published 27 ಮೇ 2024, 16:19 IST
Last Updated 27 ಮೇ 2024, 16:19 IST
ಅಕ್ಷರ ಗಾತ್ರ

ಮೊಳಕಾಲ್ಮುರು: ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿದ್ಯುತ್‌ ಲೋಪ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ವಿದ್ಯುತ್‌ ಕಡಿತ ಮತ್ತು ಜನರೇಟರ್‌ ಸಮಸ್ಯೆಯನ್ನು ಆಡಳಿತ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ಸರಿಪಡಿಸಬೇಕು. ಅದನ್ನು ಬಿಟ್ಟು ಅಂದು ರಾತ್ರಿ ಸರದಿಯಲ್ಲಿ ಕಾರ್ಯ ನಿರ್ವಹಿಸಿದ ವೈದರ ಮೇಲೆ ತಪ್ಪು ಹಾಕುವುದು ಸರಿಯಲ್ಲ. ಈ ಬಗ್ಗೆ ಸೂಕ್ತ ತನಿಖೆಯನ್ನು ನಡೆಸಿ ಆಡಳಿತ ವ್ಯವಸ್ಥೆ ಹೊಣೆ ಹೊತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಆಸ್ಪತ್ರೆಯಲ್ಲಿ ವಿದ್ಯುತ್‌ ಸಮಸ್ಯೆ, ವೈದ್ಯರು ಹಾಗೂ ಸಿಬ್ಬಂದಿ ಕೊರತೆ ಸರಿಪಡಿಸುವ ಜತೆಗೆ ಸಮರ್ಪಕವಾದ ಔಷಧ ದಾಸ್ತಾನು ಮಾಡಬೇಕು. ಇಂತಹ ಘಟನೆಗಳು ಮರುಕಳಿಸಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಿದರು.

ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ತಾಲ್ಲೂಕು ಘಟಕದ ಅಧ್ಯಕ್ಷ ಎಸ್.‌ ಮಂಜುನಾಥ್‌, ಕನಕ ಶಿವಮೂರ್ತಿ, ಡಿ.ಬಿ. ಕೃಷ್ಣಮೂರ್ತಿ, ಎಸ್.ಟಿ. ಚಂದ್ರಣ್ಣ, ಗೌತಮ್‌, ಗುರುಸ್ವಾಮಿ, ಈರಣ್ಣ, ದಾನಸೂರನಾಯಕ, ಸಣ್ಣಪ್ಪ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT