ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುರುಘಾ ಮಠದ ಆನೆ ಸಕ್ರೆಬೈಲಿಗೆ

Last Updated 3 ಮಾರ್ಚ್ 2021, 16:06 IST
ಅಕ್ಷರ ಗಾತ್ರ

ಚಿತ್ರದುರ್ಗ: ಇಲ್ಲಿನ ಮುರುಘಾ ಮಠದ ಹೆಣ್ಣಾನೆಯನ್ನು ಸಂತಾನೋತ್ಪತ್ತಿಗಾಗಿ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರಕ್ಕೆ ಬುಧವಾರ ಕಳುಹಿಸಿಕೊಡಲಾಯಿತು.

‘ಕನೇನಿ’ ಎಂಬ ಈ ಹೆಣ್ಣಾನೆಗೆ 25 ವರ್ಷ. ಸಂತಾನೋತ್ಪತ್ತಿಗಾಗಿ ನಾಲ್ಕು ತಿಂಗಳ ಅವಧಿಗೆ ಬಿಡಾರಕ್ಕೆ ತೆರಳುತ್ತಿದೆ. ಶಿವಮೂರ್ತಿ ಮುರುಘಾ ಶರಣರು ಬಾಳೆಹಣ್ಣು, ಬೆಲ್ಲ, ಕಬ್ಬು ತಿನಿಸಿ ಆನೆಯನ್ನು ಅದ್ದೂರಿಯಾಗಿ ಬೀಳ್ಕೊಟ್ಟರು.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್, ಶಿವಮೊಗ್ಗ ವನ್ಯಜೀವಿ ವಿಭಾಗದ ವೈದ್ಯ ಡಾ.ವಿನಯ್, ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ.ಕೃಷ್ಣಪ್ಪ, ಡಾ.ಪ್ರಸನ್ನಕುಮಾರ್, ಡಾ.ಕುಮಾರ್, ಡಾ.ತಿಪ್ಪೇಸ್ವಾಮಿ, ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ, ಪಟೇಲ್ ಶಿವಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT