ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬೇಡ್ಕರ್ ಆದರ್ಶ ಅಳವಡಿಸಿಕೊಳ್ಳಿ

Last Updated 6 ಡಿಸೆಂಬರ್ 2020, 15:04 IST
ಅಕ್ಷರ ಗಾತ್ರ

ಹೊಳಲ್ಕೆರೆ: ಶ್ರೇಷ್ಠ ಮಾನವತಾವಾದಿ, ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ತತ್ವ, ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ಸಂಚಾಲಕ ಕೆಂಗುಂಟೆ ಜಯಪ್ಪ ಹೇಳಿದರು.

ಪಟ್ಟಣದ ಒಂಟಿಕಂಬದ ಮಠದಲ್ಲಿ ಭಾನುವಾರ ನಡೆದ ಡಾ.ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಿಕ್ಷಣ, ಸಂಘಟನೆ, ಹೋರಾಟ ಅಂಬೇಡ್ಕರ್ ಅವರ ತತ್ವಗಳಾಗಿದ್ದವು. ಶಿಕ್ಷಣ ಪಡೆಯುವುದರಿಂದ ಮಾತ್ರ ದಲಿತರ ಉದ್ಧಾರ ಸಾಧ್ಯ ಎಂಬುದು ಅವರ ನಿಲುವಾಗಿತ್ತು. ಅವರ ಆಶಯದಂತೆ ದಲಿತ ಪೋಷಕರು ಮಕ್ಕಳಿಗೆ ಸೂಕ್ತ ಶಿಕ್ಷಣ ಕೊಡಿಸಬೇಕು. ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಆರ್ಥಿಕ ವಾಗಿ ಸದೃಢರಾಗಬೇಕು. ಮೂಢ ನಂಬಿಕೆಗಳಿಂದ ಹೊರಬರಬೇಕು ಎಂದು ಸಲಹೆ ನೀಡಿದರು.

ತಾಲ್ಲೂಕು ಸಂಚಾಲಕ ದಾಸಿಕಟ್ಟೆ ಪ್ರಸನ್ನ ಕುಮಾರ್, ಚಿಕ್ಕನ ಕಟ್ಟೆ ತಿಪ್ಪೇಸ್ವಾಮಿ, ಮದ್ದೇರು ನವೀನ್, ಬಂಡೆಹಟ್ಟಿ ಶ್ರೀನಿವಾಸ್, ನವೀನ್ ಕುಮಾರ್, ಸ್ವಾಮಿ, ಸಂತೋಷ್, ಬಸವರಾಜ್, ಮಹೇಶ್, ರುದ್ರೇಶ್, ವೆಂಕಟೇಶ್, ನರಸಿಂಹ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT