ಚಿತ್ರದುರ್ಗ: ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಯಲ್ಲಿ ಭಾಗವಹಿಸುವುದರಿಂದ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಬೆಳೆಯುತ್ತದೆ. ಸಂಸ್ಕೃತಿ ಅರಿವು ಮೂಡುವ ಜೊತೆಗೆ ಶಿಸ್ತು ಮತ್ತು ಸಂಯಮ ಅಳವಡಿಸಿಕೊಳ್ಳಲು ಸಹಾಯಕವಾಗುತ್ತದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ 2024-25ನೇ ಸಾಲಿನ ರಾಜ್ಯ ಪುರಸ್ಕಾರ ಪಡೆದ ಶಾಲೆಗಳಿಗೆ ಪ್ರಶಸ್ತಿ ಪತ್ರ ವಿತರಣೆ ಮಾಡಿ ಅವರು ಮಾತನಾಡಿದರು.

‘ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದರೆ ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನವಾಗುತ್ತದೆ. ಇದರಿಂದ ಕಲಿಕೆಯಲ್ಲೂ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ. ಎಲ್ಲಾ ಶಾಲಾ ಮಕ್ಕಳು ಈ ಚಟುವಟಿಕೆಯಲ್ಲಿ ಸೇರಲು ಮುಂದಾಗಬೇಕು. ಸುಂದರ ಬದುಕು ಹಾಗೂ ಆರೋಗ್ಯಕರ ಸಮಾಜ ನಿಮಾರ್ಣದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಶಿಸ್ತು ಪ್ರಮುಖ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳು ಅಂಕ ಗಳಿಕೆಗೆ ಮಾತ್ರ ಆದ್ಯತೆ ನೀಡದೆ ಇಂತಹ ಚಟುವಟಿಕೆಗಳಿಗೂ ಪ್ರಮುಖ ಆದ್ಯತೆ ನೀಡಬೇಕು’ ಎಂದರು.

‘ಪರಿಸರ ಉಳಿಸಿ-ಬೆಳೆಸುವ ಕಾರ್ಯವನ್ನು ಮಕ್ಕಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ತುಂಬಬೇಕು. ಮುಂದಿನ ಪೀಳಿಗೆಗೆ ಉತ್ತಮ ನಾಗರಿಕರನ್ನು ನಿರ್ಮಾಣ ಮಾಡುವ ಕೆಲಸ ಸ್ಕೌಟ್ಸ್ ಮತ್ತು ಗೈಡ್ಸ್ನಿಂದ ಆಗಬೇಕು. ಮನುಷ್ಯನಿಗೆ ಸಂತೋಷ ಮತ್ತು ಆನಂದ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಯಿಂದ ದೊರೆಯುತ್ತದೆ. ನಮ್ಮ ಕುಟುಂಬದ ಸದಸ್ಯರು ಕೂಡ ವಿದ್ಯಾಭ್ಯಾಸ ಮಾಡುತ್ತಿದ್ದ ಸಂದರ್ಭದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿ ಸೇವೆ ಸಲ್ಲಿಸಿದ್ದಾರೆ’ ಎಂದರು.

‘ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿಕೊಂಡಿರುವ ಮಕ್ಕಳಲ್ಲಿ ನಾಯಕತ್ವ ಗುಣ ಇರುತ್ತದೆ. ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಬಹು ದೊಡ್ಡದಿದೆ. ನಮ್ಮ ಜಿಲ್ಲೆಯಲ್ಲಿ 44,000 ಸ್ಕೌಟ್ಸ್ ಮತ್ತು ಗೈಡ್ಸ್ಗಳಿದ್ದ, 244 ಮಂದಿ ರಾಜ್ಯಪಾಲರ ಪ್ರಶಸ್ತಿ ಪಡೆದವರಾಗಿದ್ದಾರೆ. ಪ್ರಶಸ್ತಿ ಪಡೆದ ಮಕ್ಕಳಿಗೆಲ್ಲರಿಗೂ ಮತ್ತು ಇದಕ್ಕೆ ಸಹಕರಿಸಿದ ಅಧಿಕಾರಿಗಳಿಗೂ ಮತ್ತು ಸಿಬ್ಬಂದಿ ಅಭಿನಂದನೆಗೆ ಅರ್ಹರು’ ಎಂದರು.

ಚಿತ್ರದುರ್ಗ ನಗರದ ಎಸ್.ಆರ್.ಎಸ್ ಹೆರಿಟೇಜ್ ಶಾಲೆ, ಡಾನ್ ಬಾಸ್ಕೋ ಶಾಲೆ, ವಿದ್ಯಾ ವಿಕಾಸ ಶಾಲೆ, ವಾಸವಿ ಶಾಲೆ, ಭರಮಸಾಗರ ಡಿ.ವಿ.ಎಸ್ ಶಾಲೆ, ಹೊಳಲ್ಕೆರೆ ವಾಗ್ದೇವಿ ಶಾಲೆ ಹಾಗೂ ಶಾರದಾ ನ್ಯಾಷನಲ್ ಶಾಲೆಗಳು ಪ್ರಶಸ್ತಿ ಪಡೆದಿವೆ.

ಈ ಸಂದರ್ಭದಲ್ಲಿ ಜಿಲ್ಲಾ ಗೈಡ್ಸ್ ಆಯುಕ್ತೆ ಎಲ್.ಸವಿತಾ ಶಿವಕುಮಾರ್, ಜಿಲ್ಲಾ ಸ್ಥಾನಿಕ ಆಯುಕ್ತ ಅನಂತ್ ರೆಡ್ಡಿ, ಜಂಟಿ ಕಾರ್ಯದರ್ಶಿ ರೆಹಮಲ್ ಉಲ್ಲಾ, ಜಿಲ್ಲಾ ರೋವರ್ಸ್ ಅಧಿಕಾರಿ ತಿಪ್ಪೇಸ್ವಾಮಿ, ಉಪಾಧ್ಯಕ್ಷೆ ಶೀಲಾ ಮಂಜುನಾಥ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.