ಚಿತ್ರದುರ್ಗ: ‘ದೇಶದ ಆಡಳಿತ ಸುಭದ್ರವಾಗಿರಲು ಮತ್ತು ಉತ್ತಮ ಕಾನೂನು ರೂಪಿತವಾಗಲು ಯೋಗ್ಯ ವ್ಯಕ್ತಿಗಳನ್ನು ಆರಿಸುವ ಜವಾಬ್ದಾರಿ ಮತದಾರರ ಮೇಲಿದೆ. ಆದ್ದರಿಂದ ಪ್ರತಿಯೊಬ್ಬ ಮತದಾರನೂ ಜವಾಬ್ದಾರಿಯಿಂದ ಮತದಾನದ ಹಕ್ಕು ಚಲಾಯಿಸಬೇಕು’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರೋಣ ವಾಸುದೇವ ತಿಳಿಸಿದರು.

ನಗರದ ಶಿವಶರಣ ಮಾದಾರ ಚನ್ನಯ್ಯ ಸಭಾ ಭವನದಲ್ಲಿ ಭಾನುವಾರ ಜಿಲ್ಲಾ ಸ್ವೀಪ್ ಸಮಿತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನವು ಅತ್ಯಂತ ಶಕ್ತಿಶಾಲಿ ಆಯುಧ. ಸಾಮಾನ್ಯವಾಗಿ ಮತದಾನದ ದಿನ ರಜೆ ಇರುತ್ತದೆ ಎಂಬ ಕಾರಣಕ್ಕೆ ಜನರು ಪ್ರವಾಸಕ್ಕೆ ಅಥವಾ ವೈಯಕ್ತಿಕ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಾರೆ. ಇದು ಪ್ರಜಾಪ್ರಭುತ್ವದ ದೃಷ್ಟಿಯಿಂದ ಆರೋಗ್ಯಕರವಲ್ಲ’ ಎಂದರು.

‘ಇತ್ತೀಚೆಗೆ ಬಿಹಾರದಲ್ಲಿ ನಡೆದ ಚುನಾವಣೆಯಲ್ಲಿ ಶೇ 65 ರಿಂದ ಶೇ 70 ರಷ್ಟು ಮತದಾನವಾಗಿರುವುದು ಆಶಾದಾಯಕ. ಆದರೆ, ಉಳಿದ ಶೇ 30 ರಿಂದ ಶೇ 35 ರಷ್ಟು ಜನರು ಮತದಾನದಿಂದ ದೂರ ಉಳಿದಿರುವುದು ಕಳವಳಕಾರಿ ಸಂಗತಿ’ ಎಂದು ಬೇಸರ ವ್ಯಕ್ತಪಡಿಸಿದರು.

‘ನನ್ನ ಒಂದು ಮತದಿಂದ ಏನು ಬದಲಾವಣೆ ಸಾಧ್ಯ? ಎಂದು ಹಲವರು ಪ್ರಶ್ನಿಸುತ್ತಾರೆ. ಆದರೆ, ಇತ್ತೀಚೆಗೆ ನಮ್ಮ ರಾಜ್ಯದಲ್ಲಿ ನಡೆದ ಚುನಾವಣೆಗಳಲ್ಲಿ ಅಭ್ಯರ್ಥಿಗಳು ಕೇವಲ ಒಂದು ಅಥವಾ ಎರಡು ಮತಗಳ ಅಂತರದಿಂದ ಗೆದ್ದಿರುವುದನ್ನು ನಾವು ಕಂಡಿದ್ದೇವೆ. ಹಾಗಾಗಿ, ಪ್ರತಿ ಮತವೂ ಅಭ್ಯರ್ಥಿಯ ಭವಿಷ್ಯ ಮತ್ತು ದೇಶದ ಆಡಳಿತ ನಿರ್ಧರಿಸುವ ಶಕ್ತಿ ಹೊಂದಿದೆ’ ಎಂದು ತಿಳಿಸಿದರು.

‘ಸದೃಢ ಭಾರತದ ನಿರ್ಮಾಣಕ್ಕಾಗಿ ಪ್ರತಿಯೊಬ್ಬ ಅರ್ಹ ಮತದಾರರೂ ಜವಾಬ್ದಾರಿಯಿಂದ ಮತ ಚಲಾಯಿಸಬೇಕು. ಯಾವುದೇ ಧರ್ಮ, ಜಾತಿ, ಹಣ ಅಥವಾ ಆಮಿಷಗಳಿಗೆ ಬಲಿಯಾಗದೇ ನೈತಿಕವಾಗಿ ಮತದಾನ ಮಾಡಬೇಕು. ನಿಮ್ಮ ಒಂದು ಮತ ದೇಶದ ಭವಿಷ್ಯವನ್ನು ಬದಲಿಸಬಲ್ಲದು’ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

‘ಜಿಲ್ಲೆಯಲ್ಲಿ 14.43 ಲಕ್ಷ ಅರ್ಹ ಮತದಾರರಿದ್ದಾರೆ. ಕಳೆದ ಚುನಾವಣೆಯಲ್ಲಿ ಶೇ 72ರಷ್ಟು ಮತದಾನವಾಗಿದೆ. 3.5 ಲಕ್ಷ ಮತದಾರರು ತಮ್ಮ ಹಕ್ಕನ್ನು ಚಲಾಯಿಸಿಲ್ಲ. ಶೇ 100ರಷ್ಟು ಮತದಾನ ಗುರಿ ತಲುಪಲು ಎಲ್ಲರೂ ಸಹಕರಿಸಬೇಕು’ ಎಂದು ಮನವಿ ಮಾಡಿದರು.

‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅತಿದೊಡ್ಡ ಶಕ್ತಿಯೇ ಮತದಾನ. ಮತದಾನ ಎನ್ನುವುದು ಕೇವಲ ಹಕ್ಕಲ್ಲ. ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಯುವ ಮತದಾರರು ಉದಾಸೀನತೆ ತೋರದೆ ಕಡ್ಡಾಯವಾಗಿ ಮತಗಟ್ಟೆಗೆ ಬಂದು ತಮ್ಮ ಹಕ್ಕನ್ನು ಚಲಾಯಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಎಸ್.ಆಕಾಶ್ ತಿಳಿಸಿದರು.

ಉಪವಿಭಾಗಾಧಿಕಾರಿ ವೆಂಕಟೇಶ್ ನಾಯ್ಕ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಮತದಾರ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಮಾಣಪತ್ರ ಹಾಗೂ ಬಹುಮಾನ ವಿತರಿಸಲಾಯಿತು. ಹೊಸ ಮತದಾರರಿಗೆ ಸಾಂಕೇತಿಕವಾಗಿ ಗುರುತಿನ ಚೀಟಿ ವಿತರಿಸಲಾಯಿತು.

ಡಿವೈಎಸ್ಪಿ ಪಿ.ಕೆ.ದಿನಕರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ತಹಶೀಲ್ದಾರ್ ಬಿ.ಎಂ.ಗೋವಿಂದರಾಜ್, ಚುನಾವಣಾ ಶಿರಸ್ತೆದಾರ್ ಮಲ್ಲಿಕಾರ್ಜುನ ನಾಯಕ, ಇಂಗ್ಲಿಷ್ ವಿಷಯ ಪರಿವೀಕ್ಷಕ ಎನ್.ರಾಘವೇಂದ್ರ, ಶಿಕ್ಷಕಿ ಕೆ.ಎಸ್.ಶಶಿಕಲಾ ಇದ್ದರು.

ದೇಶದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ನಿರ್ಣಾಯಕವಾಗಿದೆ. ಮತದಾನದ ಹಕ್ಕು ಚಲಾಯಿಸದಿರುವುದು ಬೇಜವಾಬ್ದಾರಿಯಿಂದ ವರ್ತಿಸುವುದು ದೇಶದ ಪ್ರಗತಿಗೆ ಮಾರಕ
ರೋಣ ವಾಸುದೇವ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ

ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಸನ್ಮಾನ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು ಸನ್ಮಾನಿಸಲಾಯಿತು. ಯಾದಲಗಟ್ಟ ಗೊಲ್ಲರಹಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಟಿ.ರಾಜು ತುರುವನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಿ.ಎನ್.ರೂಪಾ ಕಾಸವರಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಚ್.ಸುರೇಶ್ ರೆಡ್ಡಿ ಹಳೇಸಂತೇಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ತಬಸ್ಸುಮ್ ಬಾನು ಆದಿವಾಲ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಲಲಿತಾ ಹೊಸದುರ್ಗ ತಾಲ್ಲೂಕು ಪಂಚಾಯಿತಿಯ ಮತಗಟ್ಟೆ ಅಧಿಕಾರಿ ಎನ್.ಬಿ.ಗೀತಾ ಹಾಗೂ ಗುಂಡಸಮುದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಜಿ.ಎಸ್.ಪ್ರಶಾಂತ ಅವರನ್ನು ಸನ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.