ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: ಬೆಳೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

Last Updated 12 ಅಕ್ಟೋಬರ್ 2020, 12:49 IST
ಅಕ್ಷರ ಗಾತ್ರ

ಚಿತ್ರದುರ್ಗ: ತಾಲ್ಲೂಕಿನ ಕೂನಬೇವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಷ್ಟವಾಗಿರುವ ಬೆಳೆಗೆ ವಿಮೆ ಪಾವತಿಸುವಂತೆ ಒತ್ತಾಯಿಸಿ ರಾಷ್ಟ್ರೀಯ ಕಿಸಾನ್‌ ಸಂಘದ ನೇತೃತ್ವದಲ್ಲಿ ರೈತರು ಸೋಮವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ರೈತರು ವಿಮೆ ಕೈತಪ್ಪಲು ಕಾರಣರಾದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಸಂಗಪ್ಪ ಅವರಿಗೆ ಮನವಿ ಸಲ್ಲಿಸಿ ನ್ಯಾಯ ದೊರಕಿಸಿಕೊಡುವಂತೆ ಕೋರಿದರು.

ಕೂನಬೇವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈರುಳ್ಳಿ, ಮೆಕ್ಕೆಜೋಳ, ಸೂರ್ಯಕಾಂತಿ, ರಾಗಿ, ಕಡ್ಲೆ, ಜೋಳ ಸೇರಿ ಹಲವು ಬೆಳೆಗಳನ್ನು ಬೆಳೆಯಲಾಗುತ್ತಿದೆ. 2016ರಿಂದಲೂ ಈ ಬೆಳೆಗಳಿಗೆ ವಿಮೆ ಕಂತು ಪಾವತಿಸುತ್ತಿದ್ದೇವೆ. ಆದರೆ, ಈವರೆಗೆ ಪರಿಹಾರ ಸಿಕ್ಕಿಲ್ಲ. ಬರ ಹಾಗೂ ಅತಿವೃಷ್ಟಿಯ ಪರಿಹಾರವೂ ರೈತರಿಗೆ ತಲುಪಿಲ್ಲ. ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಹಕಾರ ಸಂಘದಿಂದ ರೈತರಿಗೆ ಸಬ್ಸಿಡಿ ದರದಲ್ಲಿ ಬೀಜ ಹಾಗೂ ಗೊಬ್ಬರ ವಿತರಿಸಬೇಕು. ರೈತರು ಜಮೀನು ಕೆಲಸಕ್ಕೆ ತೆರಳಲು ಅನುಕೂಲವಾಗುವಂತೆ ರಸ್ತೆ ನಿರ್ಮಿಸಬೇಕು. ಕೊಳವೆ ಬಾವಿಗೆ ಅಗತ್ಯಕ್ಕೆ ತಕ್ಕಂತೆ ವಿದ್ಯುತ್‌ ಪರಿವರ್ತಕ ಅಳವಡಿಸಬೇಕು ಎಂದು ಆಗ್ರಹಿಸಿದರು.

ಕಿಸಾನ್‌ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೊಂಚೆ ಶಿವರುದ್ರಪ್ಪ, ಮುಖಂಡರಾದ ಜೆ.ತಿಪ್ಪೇಸ್ವಾಮಿ, ಎಂ.ಬಿ.ಜಯಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT