ಚಿತ್ರದುರ್ಗ: ರೇಷ್ಮೆ ಬೆಲೆ ಕುಸಿತದಿಂದ ಕಂಗಾಲಾದ ಬೆಳೆಗಾರರು ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಲಾಕ್‌ಡೌನ್ ಕಾರಣಕ್ಕೆ ರೇಷ್ಮೆ ಬೆಲೆ ಗಣನೀಯವಾಗಿ ಕುಸಿದಿದೆ. ನಿಗದಿತ ಆದಾಯ ಪಡೆಯುತ್ತಿದ್ದ ರೇಷ್ಮೆ ಬೆಳೆಗಾರರು ತೊಂದರೆಗೆ ಸಿಲುಕಿದ್ದಾರೆ. ಸರ್ಕಾರ ಕೂಡಲೇ ಬೆಳೆಗಾರರಿಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು.
ಚಿತ್ರದುರ್ಗ ಜಿಲ್ಲೆಯಲ್ಲಿ ಅನೇಕರು ರೇಷ್ಮೆ ಕೃಷಿ ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ಯುವ ಸಮೂಹ ಕೂಡ ರೇಷ್ಮೆ ಕೃಷಿಯತ್ತ ಒಲವು ತೋರುತ್ತಿದೆ. ಇಂತಹ ಸಂದರ್ಭದಲ್ಲಿ ಬೆಲೆ ಕುಸಿತ ಉಂಟಾಗಿರುವುದು ಬೆಳೆಗಾರರಲ್ಲಿ ನಿರಾಶೆ ಮೂಡಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿ ಕೆ.ಜಿ ರೇಷ್ಮೆ ಉತ್ಪಾದನೆಗೆ ₹ 300ಕ್ಕೂ ಹೆಚ್ಚು ವೆಚ್ಚವಾಗುತ್ತದೆ. ಬೆಳೆ ಬೆಳೆಯಲು ರೈತರು ಮಾಡಿದ ಖರ್ಚು ಕೂಡ ಸಿಗದಂತೆ ಆಗಿದೆ. ಉತ್ಪಾದನಾ ವೆಚ್ಚಕ್ಕೆ ಶೇ 50ರಷ್ಟು ಲಾಭಾಂಶ ಸೇರಿಸಿ ಬೆಂಬಲ ಬೆಲೆ ಘೋಷಣೆ ಮಾಡಬೇಕು.
ಲಾಕ್‌ಡೌನ್ ಕಾರಣಕ್ಕೆ ಸಂಕಷ್ಟಕ್ಕೆ ಸಿಲುಕಿದ ಬೆಳೆಗಾರರ ಪ್ರತಿ ಕೆ.ಜಿ ರೇಷ್ಮೆಗೆ ಸರ್ಕಾರ ₹ 150 ಪರಿಹಾರ ಧನ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.