ಹೊಸದುರ್ಗ: ಫೆ. 23ರಂದು ತಾಲ್ಲೂಕಿನ ರೈತರು ಸಂಸದರ ಮನೆಗೆ ಮುತ್ತಿಗೆ ಹಾಕುವ ಬಗ್ಗೆ ಶನಿವಾರ ನಡೆದ ರೈತರ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

‘ಸಂಸದರು ಜಿಲ್ಲೆಯನ್ನು ಸಮಗ್ರ ನೀರಾವರಿ ಪದ್ಧತಿಗೆ ಒಳಪಡಿಸಿ, ಎಲ್ಲಾ ಜಮೀನುಗಳಿಗೆ ಹನಿ ನೀರಾವರಿ ಕಲ್ಪಿಸಲಾಗುವುದು. ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದಿಂದ ₹ 5300 ಕೋಟಿ ಅನುದಾನ ಬಿಡುಗಡೆಗೊಳಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಸಂಸದರಾಗಿ ಎರಡು ವರ್ಷ ಕಳೆದರೂ ಯಾವುದೇ ಪ್ರಗತಿಯ ಮುನ್ಸೂಚನೆ ಕಂಡಿಲ್ಲ. ಜಿಲ್ಲೆಯ ಎಲ್ಲಾ ರೈತರು ಸಂಸದರ ಮನೆಗೆ ಮುತ್ತಿಗೆ ಹಾಕಿ, ಧರಣಿ ನಡೆಸಲು ತೀರ್ಮಾನಿಸಲಾಗಿದೆ’ ಎಂದು ರೈತ ಸಂಘದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ಧವೀರಪ್ಪ ತಿಳಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷರಾದ ಕೆ.ಟಿ. ತಿಪ್ಪೇಸ್ವಾಮಿ, ತಾಲ್ಲೂಕು ಘಟಕದ ಅಧ್ಯಕ್ಷ ಚಿತ್ತಯ್ಯ, ರೈತ ಮುಖಂಡರಾದ ನಿರಂಜನಮೂರ್ತಿ, ಕರಿಸಿದ್ದಯ್ಯ, ಕುಮಾರಣ್ಣ, ಬೋರೇಶ ಕೆ.ಸಿ., ಮಹೇಶ್ವರಪ್ಪ, ಶಿವಣ್ಣ, ಮತ್ತೋಡು ಬೊಮ್ಮಣ್ಣ, ಮಾಯಣ್ಣ, ನಿಂಗರಾಜ ಸೇರಿದಂತೆ ರೈತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.