ಮಂಗಳವಾರ, ಜೂನ್ 28, 2022
20 °C

ಚಿತ್ರದುರ್ಗ: ರಸಗೊಬ್ಬರ ಖರೀದಿಗೆ ಮುಗಿಬಿದ್ದ ರೈತರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಇಲ್ಲಿನ ಎಪಿಎಂಸಿ ಮಾರುಕಟ್ಟೆಯಲ್ಲಿ ರಸಗೊಬ್ಬರ ಖರೀದಿಗೆ ರೈತರು ಸೋಮವಾರ ಮುಗಿಬಿದ್ದಿದ್ದರು. ಕೋವಿಡ್‌ ನಿಯಂತ್ರಣಕ್ಕೆ ವಿಧಿಸಿದ ಮಾರ್ಗಸೂಚಿಗಳು ಇಲ್ಲಿ ಪಾಲನೆ ಆಗಲಿಲ್ಲ.

ಪೂರ್ವ ಮುಂಗಾರು ಮಳೆ ಉತ್ತಮವಾಗಿ ಸುರಿದಿದ್ದು ರೈತರು ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ಬೀಜ, ರಸಗೊಬ್ಬರ ಖರೀದಿಗೆ ಮುಂದಾಗಿದ್ದಾರೆ. ಸೋಮವಾರ ಬೆಳಿಗ್ಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಸಿಕ್ಕಿದ್ದರಿಂದ ರೈತರು ನಿರೀಕ್ಷೆ ಮೀರಿ ಧಾವಿಸಿದ್ದರು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಜನಜಂಗುಳಿ ನಿರ್ಮಾಣವಾಗಿತ್ತು.

ಇಫ್ಕೋ ಕಂಪನಿಯ ರಸಗೊಬ್ಬರಕ್ಕೆ ಭಾರಿ ಬೇಡಿಕೆ ಸೃಷ್ಟಿಯಾಗಿದೆ. ಬಹುತೇಕ ರೈತರು ಇದೇ ರಸಗೊಬ್ಬರ ಖರೀದಿಗೆ ಮುಗಿಬಿದ್ದಿದ್ದರು. ಬಹುತೇಕ ರೈತರು ಅಂತರ ಕಾಯ್ದುಕೊಳ್ಳುವುದನ್ನು ಮರೆತಿದ್ದರು. ಮಾಸ್ಕ್‌ ಇದ್ದರೂ ಸರಿಯಾಗಿ ಧರಿಸಿರಲಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು