ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 200 ದಂಡದ ಎಚ್ಚರಿಕೆ

Last Updated 21 ಏಪ್ರಿಲ್ 2021, 5:45 IST
ಅಕ್ಷರ ಗಾತ್ರ

ಚಳ್ಳಕೆರೆ: ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವುದರಿಂದ ಪ್ರತಿದಿನ ಸಾವಿನ ಪ್ರಕರಣಗಳು ಹೆಚ್ಚುತ್ತಿವೆ. ಆದಕಾರಣ ಪ್ರತಿಯೊಬ್ಬರೂ ಮಾಸ್ಕ್‌ಅನ್ನು ಕಡ್ಡಾಯವಾಗಿ ಧರಿಸುವ ಮೂಲಕ ಸೋಂಕು ನಿಯಂತ್ರಿಸಲು ಕೈಜೋಡಿಸಬೇಕು ಎಂದು ಪೋಲಿಸ್ ನಿರೀಕ್ಷಕ ಎಸ್.ಜೆ. ತಿಪ್ಪೇಸ್ವಾಮಿ ಮನವಿ ಮಾಡಿದರು.

ನಗರಸಭೆ ಹಾಗೂ ಪೋಲಿಸ್ ಇಲಾಖೆಯ ಸಹಯೋಗದಲ್ಲಿ ನಗರದ ನೆಹರೂ ಸರ್ಕಲ್‍ನಲ್ಲಿ ಮಂಗಳವಾರ ಆಯೋಜಿಸಿದ್ದ ಆಟೊ ಚಾಲಕರ ಜಾಗೃತಿ ಸಭೆಯಲ್ಲಿ ಮಾತನಾಡಿದರು.

ಮಾಸ್ಕ್‌ ಧರಿಸದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವ ಜತೆಗೆ ₹ 200 ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದರು.

ಪೌರಾಯುಕ್ತ ಪಾಲಯ್ಯ, ಕೋವಿಡ್‌ ಎರಡನೇ ಅಲೆಯನ್ನು ನಿಯಂತ್ರಿಸಲು ಎಲ್ಲ ವಾರ್ಡ್‌ಗಳಲ್ಲಿ ಪ್ರತಿ ದಿನ ತ್ಯಾಜ್ಯ ವಿಲೇವಾರಿ ಮಾಡಲಾಗುತ್ತಿದೆ. ಸ್ಯಾನಿಟೈಸರ್‌ ಹಾಗೂ ಸೋಂಕು ನಿವಾರಕ ದ್ರಾವಣದ ಸಿಂಪಡಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.

ಮಾರುಕಟ್ಟೆ ಆವರಣದಲ್ಲಿ ಸೊಪ್ಪು-ತರಕಾರಿ, ಹೂವು, ಹಣ್ಣು ಮಾರಾಟಗಾರರು ತಪ್ಪದೇ ಮಾಸ್ಕ್‌ ಧರಿಸಿ, ಅಂತರ ಕಾಯ್ದುಕೊಂಡು ವ್ಯಾಪಾರ ನಡೆಸಬೇಕು ಎಂದು ಸಲಹೆ ನೀಡಿದರು. ನಗರಸಭೆ ಸಾಮಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್‍ಗೌಡ, ಹಿರಿಯ ಆರೋಗ್ಯ ನಿರೀಕ್ಷಕ ಮಹಾಲಿಂಗಪ್ಪ ಮಾತನಾಡಿದರು.
ದಾದಾಪೀರ್, ಗಣೇಶ್, ಹೆಡ್‌ ಕಾನ್‌ಸ್ಟೆಬಲ್‌ ಚಂದ್ರನಾಯ್ಕ, ವೆಂಕಟೇಶ್‌, ಸಂತೋಷ್‍ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT